ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವರ್ಗಾವಣೆ ದಂಧೆ ಆರೋಪ ಮಾಡಿ ಸರಣಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದ್ದಾರೆ.
ಪಂಚಗ್ಯಾರಂಟಿಗಳ ಸರ್ಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು ಕಾಸಿಗಾಗಿ ಪೋಸ್ಟಿಂಗ್ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರ್ಕಾರ ಉರುಳಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವಣೆ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ.
ಶಿಫಾರಸು ಪತ್ರಗಳಿಗೆ ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್ ಕಂಟ್ರೋಲ್ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ.
ಸರ್ಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್ʼ ದಂಧೆ ಶುರುವಾಗಿದೆ. ʼಸರ್ಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರ್ಕಾರರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ವಾಗ್ಧಾಳಿ ನಡೆಸಿದ್ದಾರೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ