ಸಾರಿಗೆ ನೌಕರರ ಮುಷ್ಕರ ಹಿಂದಕ್ಕೆ ತೆಗೆದುಕೊಳ್ಳಲು ಸರ್ಕಾರ ಕಠಿಣ ಕ್ರಮಗಳಿಗೆ ಮುಂದಾಗಿದೆ.
ವಿವಿಧ ನಿಗಮಗಳ ಸಾರಿಗೆ ನೌಕರರನ್ನು ಅಧಿಕಾರಿಗಳು ವರ್ಗಾವಣೆ ಮಾಡಿ ಚಿತ್ರದುರ್ಗ, ಮೈಸೂರು, ಮಂಡ್ಯ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದ ನೌಕರರನ್ನು ವರ್ಗಾವಣೆ ಮಾಡಲಾಗಿದೆ.
ಆಡಳಿತಾತ್ಮಕ ಕಾರಣ ನೀಡಿ ಸಾರಿಗೆ ನೌಕರರನ್ನು ವರ್ಗಾವಣೆ ಮಾಡಿ, ಚಿತ್ರದುರ್ಗ ವಿಭಾಗದಲ್ಲಿ 10 ಸಾರಿಗೆ ನೌಕರರನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಮಂಡ್ಯ ವಿಭಾಗದ 14 ನೌಕರರು ಹಾಗೂ ಮೈಸೂರು ವಿಭಾಗದ 33 ನೌಕರರಿಗೂ ವರ್ಗಾವಣೆ ನೀಡಲಾಗಿದೆ.
ಮೈಸೂರಿನಿಂದ ಮಂಗಳೂರು, ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆ ಮಾಡಿರುವುದಾಗಿ ತಿಳಿದುಬಂದಿದೆ. ಮುಷ್ಕರದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆಯಾದರೂ ವರ್ಗಾವಣೆಗೆ ಸಂಬಂಧಿಸಿದಂತೆ ಆಡಳಿತಾತ್ಮಕ ಕಾರಣ ನೀಡಲಾಗಿದೆ.
ಈ ಮಧ್ಯೆ, ಸರ್ಕಾರ ಹಾಗೂ ಸಾರಿಗೆ ಅಧಿಕಾರಿಗಳ ಯಾವ ಆದೇಶಕ್ಕೂ ಜಗ್ಗದ ನೌಕರರು ಕರ್ತವ್ಯಕ್ಕೆ ಹಾಜರಾಗದಿರಲು ನಿರ್ಧರಿಸಿದ್ದಾರೆ.
ಮುಷ್ಕರವನ್ನು ಇನ್ನಷ್ಟು ತೀವ್ರಗೊಳಿಸಲು ನಿರ್ಧರಿಸಿದ್ದಾರೆ. ಈ ನಡುವೆ ಕೋಡಿಹಳ್ಳಿ ಚಂದ್ರಶೇಖರ್ ಬೆಳಗಾವಿಗೆ ಇಂದು ಬೆಳಗಾವಿ ಹಾಗೂ ಕಲಬುರ್ಗಿಯಲ್ಲಿ ಸಾರಿಗೆ ಮುಖಂಡರು ಹಾಗೂ ನೌಕರರು ಸಭೆ ನಡೆಸಲಿದ್ದಾರೆ. ಯಾವ ರೀತಿ ಮುಷ್ಕರವನ್ನು ಮುಂದುವರೆಸಬೇಕೆಂದು ತೀರ್ಮಾನಿಸಲಿದ್ದಾರೆ.
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
- ತಿರುಪತಿ ತಿಮ್ಮಪ್ಪನ ಚಿನ್ನ ಕದಿಯಲು ಹೋಗಿ ಸಿಕ್ಕಿಬಿದ್ದ ಟಿಟಿಡಿ ನೌಕರ
- ಕೆಯುಡಬ್ಲೂೃಜೆ ವಾರ್ಷಿಕ ಪ್ರಶಸ್ತಿಗಳ ಪ್ರಕಟ
- ಸಂಕ್ರಾಂತಿ….
More Stories
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ