ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಪೊಲೀಸರು ಬೆಳಗಾವಿಯಲ್ಲಿ ವಶಕ್ಕೆ ಪಡೆದುಕೊಡಿದ್ದಾರೆ.
ಮಿಲನ್ ಹೋಟೆಲ್ ಬಳಿ ಮುಂಜಾಗೃತ ಕ್ರಮವಾಗಿ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನ ವಶಕ್ಕೆ ಪಡೆಯಲಾಗಿದೆ.
6ನೇ ವೇತನ ಆಯೋಗ ಜಾರಿ ಮಾಡಬೇಕೆಂದು ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ರಾಜ್ಯಾದ್ಯಂತ ಮುಷ್ಕರವನ್ನು ಮತ್ತಷ್ಟು ತೀವ್ರಗೊಳಿಸಲು ಸಾರಿಗೆ ನೌಕರರ ಮುಖಂಡರು ತಯಾರಿ ನಡೆಸಿದ್ದಾರೆ. ಇದರ ಮುಂದುವರಿದ ಭಾಗವಾಗಿ ಕೋಡಿಹಳ್ಳಿ ಚಂದ್ರಶೇಖರ್ ಇಂದು ಬೆಳಗಾವಿ ಹಾಗೂ ಕಲಬುರಗಿಯಲ್ಲಿ ಅವರು ಸಾರಿಗೆ ಮುಖಂಡರು ಹಾಗೂ ನೌಕರರ ಜೊತೆ ಸಭೆ ನಡೆಸಲು ತೆರಳಿದ್ದರು.
12 ಗಂಟೆಗೆ ಸಭೆ ನಡೆಯಬೇಕಿತ್ತು. ಆದರೆ ಪೊಲೀಸರು ಮುಂಜಾಗೃತ ಕ್ರಮವಾಗಿ ಅವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.
ಕೋಡಿಹಳ್ಳಿಯನ್ನ ಪೊಲೀಸ್ ವಶಕ್ಕೆ ಪಡೆದಿರುವ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
- ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
- ತಿರುಪತಿ ತಿಮ್ಮಪ್ಪನ ಚಿನ್ನ ಕದಿಯಲು ಹೋಗಿ ಸಿಕ್ಕಿಬಿದ್ದ ಟಿಟಿಡಿ ನೌಕರ
More Stories
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ