December 23, 2024

Newsnap Kannada

The World at your finger tips!

ramaling reddy

ಸಾರಿಗೆ ಸಚಿವರ ಭರವಸೆ – ಬೆಂಗಳೂರು ಬಂದ್’ ಹಿಂದಕ್ಕೆ – ಬ್ಯಾಕ್ ಟು ನಾರ್ಮಲ್

Spread the love

ಬೆಂಗಳೂರು;

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದ ಸೋಮವಾರ ಬೆಂಗಳೂರಲ್ಲಿ ಖಾಸಗಿ ಸಾರಿಗೆ ಒಕ್ಕೂಟಗಳು ಬಂದ್ ಗೆ ಕರೆ ನೀಡಿದ್ದವು. ಈ ಪ್ರತಿಭಟನಾ ನಿರತ ಸ್ಥಳಕ್ಕೆ ತೆರಳಿದ್ದಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಅವರ ಬಹುತೇಕ ಬೇಡಿಕೆ ಈಡೇರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರು ಹಿಂದಕ್ಕೆ ಪಡೆಯಲಾಗಿದೆ.

ಬೆಂಗಳೂರಲ್ಲಿ ಟ್ಯಾಕ್ಸಿ, ಖಾಸಗಿ ಬಸ್, ಆಟೋ ಸೇವೆಯನ್ನು ಸ್ಥಗಿತಗೊಳಿಸಿದ ಸಂಘಟನೆಗಳು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿತ್ತು.

ಪ್ರತಿಭಟನಾ ನಿರತ ಸ್ಥಳಕ್ಕೆ ತೆರಳಿದ್ದಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಖಾಸಗಿ ಬಸ್ ಮಾಲೀಕರ ಬೇಡಿಕೆ ಈಡೇರಿಕೆ ಬಗ್ಗೆ ಸಿಎಂ ಸಿದ್ಧರಾಮಯ್ಯ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ. ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಯಾವುದಕ್ಕೂ ಲೈಸೆನ್ಸ್ ತೆಗೆದುಕೊಂಡಿಲ್ಲ. ಕಾನೂನು ಭಾಹಿರವಾಗಿ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

2021ರಿಂದ ರ್ಯಪಿಡ್ ಬೈಕ್ , ಟ್ಯಾಕ್ಸಿ ಸಂಚಾರದ ಬಗ್ಗೆ ಸ್ಟೇ ತೆಗೆದುಕೊಂಡಿದ್ದಾರೆ. ಅದು ಕಾನೂನು ಚೌಕಟ್ಟಿನಲ್ಲಿ ನಡೆಯುತ್ತಿದೆ. ಅವುಗಳನ್ನು ಕ್ಲೋಸ್ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಖಾಸಗಿ ಸಾರಿಗೆಯವರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನು ಬಾಹಿರವಾಗಿ ಗೂಡ್ಸ್ ವಾಹನ ಓಡಾಟ ಮಾಡಿದರೇ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಖಾಸಗಿ ವಾಹನ ಮಾಲೀಕರಿಗೆ ಫೈನಾನ್ಸ್ ಕಿರುಕುಳ ತಪ್ಪಿಸೋ ಸಲುವಾಗಿ ಪೊಲೀಸ್ ಕಮೀಷನರ್ ಜೊತೆಗೆ ಮಾತನಾಡಿ ಸಮಸ್ಯೆ ಬಗೆ ಹರಿಸಲು ಸೂಚಿಸುವುದಾಗಿ ಹೇಳಿದರು.

ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವ ಬಗ್ಗೆ ಸಿಎಂ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆದು, ಖಾಸಗೀ ವಾಹನ ಚಾಲಕರು, ಮಾಲೀಕರಿಗೆ ಅನುಕೂಲ ಕಲ್ಪಿಸಲಾಗುತ್ತದೆ.

ವೈಟ್ ಬೋರ್ಟ್ ವಾಹನಗಳೊಂದಿಗೆ ಬಾಡಿಗೆ ಹೊಡೆಯುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆಪ್ ಆಧಾರಿತ ಬೈಕ್ ಟ್ಯಾಕ್ಸಿ ಸಂಚಾರ ಬಂದ್ ಗೆ ಕಾನೂನು ತಜ್ಞರು, ಸಾರಿಗೆ ಇಲಾಖೆಯವರು ಕ್ರಮ ವಹಿಸಿದ್ದಾರೆ. ಅವುಗಳ ನಿಷೇಧಕ್ಕೆ ಕ್ರಮವಹಿಸಲಾಗುತ್ತದೆ. ಖಾಸಗಿ ಸಾರಿಗೆ ವಾಹನಗಳ ಟ್ಯಾಕ್ಸ್ ಕಡಿತಕ್ಕೂ ಕ್ರಮ ಕೈಗೊಳ್ಳಲಾಗುತ್ತ ಎಂದು ತಿಳಿಸಿದರು.

ಖಾಸಗಿ ವಾಹನ ಚಾಲಕರಿಗೆ ವಸತಿ ಯೋಜನೆಯಡಿ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟನಲ್ಲಿ ವಸತಿ ಸಚಿವರೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುತ್ತದೆ ಎಂಬುದಾಗಿ ಭರವಸೆ ನೀಡಿದರು.

ಶೀಘ್ರವೇ ಚಾಲಕರ ಅಭಿವೃದ್ಧಿ ನಿಗಮ ಸ್ಥಾಪನೆ ಕೂಡ ಮಾಡಲಾಗುತ್ತದೆ ಎಂದು ತಿಳಿಸಿದರು. ಈ ಹಿನ್ನಲೆಯಲ್ಲಿ ಇದೀಗ ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದಿಂದ ಬೆಂಗಳೂರು ಬಂದ್ ಹಿಂಪಡೆಯಲಾಗಿದೆ.

Copyright © All rights reserved Newsnap | Newsever by AF themes.
error: Content is protected !!