February 24, 2026

Newsnap Kannada

The World at your finger tips!

free , bus , pass

Free bus pass - only up to 50 K.M from home ? ಉಚಿತ ಬಸ್ ಪಾಸ್ - ಮನೆಯಿಂದ 50 K.M ವರೆಗೆ ಮಾತ್ರ ?

ಸಾರಿಗೆ ನೌಕರರ ಮುಷ್ಕರ ಅಂತ್ಯ- ನಾಳೆಯಿಂದ ಬಸ್ ಸಂಚಾರ ಸುಗಮ‌: ಕೋಡಿಹಳ್ಳಿ ಘೋಷಣೆ

Spread the love

ರಾಜ್ಯ ಉಚ್ಚ ನ್ಯಾಯಾಲಯದ ಸೂಚನೆ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರವನ್ನು ಇಂದು ತಾತ್ಕಾಲಿಕವಾಗಿ ಅಂತ್ಯಗೊಳಿಸುತ್ತಿದ್ದೇವೆ. ನಾಳೆಯಿಂದ ಬಸ್ ಸಂಚಾರ ಸುಗಮವಾಗಲಿದೆ ಎಂದು ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಪ್ರಕಟಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ನಾವು ಸೇವೆಗೆ ಹಾಜರಾಗುತ್ತೇವೆ. ಸದ್ಯ ಮುಷ್ಕರವನ್ನು ಮುಂದೂಡುತ್ತೇವೆ. ಸಾರಿಗೆ ನೌಕರರ ಮುಷ್ಕರ ಅಂತ್ಯವಾಗಿದೆ ಎಂದರು.

 ಕರ್ನಾಟಕದ ಉಚ್ಛ ನ್ಯಾಯಾಲಯ ಮಧ್ಯಪ್ರವೇಶ ಮಾಡಿದೆ. ನ್ಯಾಯಮೂರ್ತಿಗಳು ಹೇಳಿದ್ದನ್ನು ಗೌರವಿಸ್ತೀವಿ. ಸೇವೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ಕೋವಿಡ್ ಕಾರಣದಿಂದ ಕರ್ತವ್ಯಕ್ಕೆ ಹಾಜರಾಗಿ, ಜನರಿಗೆ ತೊಂದರೆ ನೀಡಬೇಡಿ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ. ಹೀಗಾಗಿ ನ್ಯಾಯಾಲಯ ಆದೇಶ ಮಾಡಿದಂತೆ ನಾವು ಕರ್ತವ್ಯಕ್ಕೆ ಹಾಜರಾಗುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

error: Content is protected !!