December 26, 2024

Newsnap Kannada

The World at your finger tips!

WhatsApp Image 2022 03 29 at 9.51.01 AM

25 ವರ್ಷದ ಯುವತಿ ಮದ್ವೆಯಾಗಿ ವೈರಲ್ ಆಗಿದ್ದ ಶಂಕರಣ್ಣ ಆತ್ಮಹತ್ಯೆ!

Spread the love

ಕಳೆದ ವರ್ಷ 45 ವರ್ಷದ ವ್ಯಕ್ತಿ ಜೊತೆಗೆ 25ರ ಯುವತಿ ಮದುವೆಯಾಗಿದ್ದ ಸುದ್ದಿ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಸದ್ದು ಮಾಡಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಶಂಕರಣ್ಣ(46) ಮೃತ ದುರ್ದೈವಿ, ಕಳೆದ ವರ್ಷ ಕುಣಿಗಲ್ ತಾಲೂಕಿನ ಚೌಡನಕುಪ್ಪೆ ಗ್ರಾಮದ ಬಳಿಯಿರುವ ಅಕ್ಕಿಮರಿಪಾಳ್ಯದ ಶಂಕರಣ್ಣ ಮತ್ತು ಮೇಘನಾ ಮದುವೆ ನಡೆದಿತ್ತು.

ಆದರೆ ಮದುವೆಯಾದ ಐದು ತಿಂಗಳಿನಲ್ಲಿಯೇ ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂರ್ನಾಲ್ಕು ದಿನದಿಂದ ಗಂಡ, ಹೆಂಡತಿ ಜೊತೆ ಜಗಳ ನಡೆಯುತ್ತಿತ್ತು. ಹೀಗಾಗಿ ಕೋಪ ಮಾಡಿಕೊಂಡು ಸೋಮವಾರ ಮನೆ ಬಿಟ್ಟು ಹೋಗಿದ್ದ ಶಂಕರಣ್ಣನವರು, ಕುಣಿಗಲ್ ತಾಲೂಕಿನ ಅಕ್ಕಿಮರಿಪಾಳ್ಯದಲ್ಲಿದ್ದ ತಮ್ಮ ತೋಟದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.

2021ರಲ್ಲಿ ಮದುವೆಯಾಗಿದ್ದ ಈ ದಂಪತಿ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.

ಸಂತೆಮಾವತ್ತೂರು ಗ್ರಾಮದ ನಿವಾಸಿಯಾಗಿದ್ದ ಮೇಘನಾಗೆ ಈ ಮುನ್ನ ಬೇರೆಯವರೊಂದಿಗೆ ಮದುವೆಯಾಗಿತಂತೆ. ಆದರೆ ಪತಿ ಎರಡು ವರ್ಷಗಳಿಂದ ಕಾಣೆಯಾಗಿದ್ದರಿಂದ ಮೇಘನಾಳೇ ಹೋಗಿ ಶಂಕರಣ್ಣ ಅವರನ್ನು ಮದುವೆಯಾಗಿದ್ದಾಳಂತೆ.

ಸ್ವತಃ ಮೇಘನಾ ಶಂಕರಣ್ಣ ಬಳಿ ಹೋಗಿ ಮದುವೆಯಾಗಿ ಅಂತಾ ಕೇಳಿಕೊಂಡಿದ್ದಳು. ಆದರೆ ಮೊದಲಿಗೆ ಮದುವೆಯಾಗಲು ಒಪ್ಪದ ಶಂಕರಣ್ಣ ಕೊನೆಗೆ ಒಪ್ಪಿಕೊಂಡು ಮೇಘನಾಳನ್ನು ಸಮೀಪದ ದೇವಾಲಯದಲ್ಲಿ ಮದುವೆಯಾಗಿದ್ದರು.

Copyright © All rights reserved Newsnap | Newsever by AF themes.
error: Content is protected !!