ಟ್ವೀಟ್ ಮಾಡಿರುವ ಪ್ರಧಾನಿ, ಕರ್ನಾಟಕದ ತುಮಕೂರಲ್ಲಿ ನಡೆದ ರಸ್ತೆ ಅಪಘಾತವು ಹೃದಯ ವಿದ್ರಾವಕವಾಗಿದೆ. ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.ಇದನ್ನು ಓದಿ –ಸರ್ಕಾರದ ಟ್ರಸ್ಟ್ ಗಳ ಅಧ್ಯಕ್ಷ ಸ್ಥಾನ ನಿರಾಕರಿಸಿದ ಸೂಲಿಬೆಲೆ, ಸಾಹಿತಿ ದೇರ್ಲ
ಮೃತರ ಕುಟುಂಬಕ್ಕೆ ತಲಾ ಪಿಎಂಎನ್ಆರ್ಎಫ್ ಅಡಿಯಲ್ಲಿ 2 ಲಕ್ಷ ರೂಪಾಯಿ ಪರಿಹಾರ ಹಾಗೂ ಗಾಯಗೊಂಡವರಿಗೆ 50 ಸಾವಿರ ರೂಪಾಯಿ ನೀಡೋದಾಗಿ ಘೋಷಣೆ ಮಾಡಿದ್ದಾರೆ.
ತುಮಕೂರಿನ ಶಿರಾ ರಸ್ತೆಯ ಬಾಲೇನಹಳ್ಳಿ ಗೇಟ್ ಬಳಿ ಲಾರಿ ಮತ್ತು ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ದುರ್ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿ 14 ಪ್ರಯಾಣಿಕರು ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು