ಸಂಸದ ಜಿಎಸ್ ಬಸವರಾಜು ಅವರೇ ಈ ಗುಟ್ಟು ಬಿಚ್ಚಿಟ್ಟು ಕೂತಹಲ ಮೂಡಿಸುವಂತೆ ಮಾಡಿದ್ದಾರೆ.
ತುಮಕೂರಿನಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಂಸದ ಬಸವರಾಜು ನನಗೆ ವಯಸ್ಸಾದ ಕಾರಣ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ. ಮುಂದಿನ ಚುನಾವಣೆಗೆ ನಮ್ಮ ಸಮುದಾಯದವರೇ ಆದ ವಿ ಸೋಮಣ್ಣಗೆ ಟಿಕೆಟ್ ಕೊಡುತ್ತಾರೆ. ದೆಹಲಿಗೆ ಹೋದಾಗ ನಾನು ಇದನ್ನು ಹೇಳಿದ್ದೇನೆ. ಹೀಗಾಗಿ ಸಮುದಾಯದ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು.
ಸಂಸದ ಜಿಎಸ್ ಬಸವರಾಜು ಅವರ ಈ ಮಾತು ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಲೋಕಸಭಾ ಟಿಕೆಟ್ ಬಯಸಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿದ್ದ ಮಾಜಿ ಸಂಸದ ಮುದ್ದಹನುಮೇಗೌಡ, ಲೋಕಸಭಾ ಕ್ಯಾಂಡಿಡೇಟ್ ಎಂದೇ ಬಿಂಬಿಸಿಕೊಂಡಿದ್ದ ಲೇಔಟ್ ಚಿದಾನಂದರಿಗೆ ಸಂಸದರ ಈ ಹೇಳಿಕೆ ನಿದ್ದೆಗೆಡಿಸಿದೆ.ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ಪ್ರಕಟ
ಮಾಜಿ ಸಚಿವ ಮಾಧುಸ್ವಾಮಿ ಅವರೂ ಲೋಕಸಭೆಗೆ ಸೂಕ್ತ ಎಂದು ಜಿಲ್ಲಾ ಬಿಜೆಪಿಯಲ್ಲಿ ಚರ್ಚೆ ಮಾಡಿದ್ದಾರೆ. ಈ ನಡುವೆ ಜಿಎಸ್ ಬಸವರಾಜು ಅವರ ಹೊಸ ದಾಳಿ ಗೊಂದಲಕ್ಕೆ ಕಾರಣವಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು