ಸೋಮಣ್ಣಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ? ಸಂಸದ ಬಸವರಾಜ್

Team Newsnap
1 Min Read
Tumkur Lok Sabha seat ticket for Somanna? MP Basavaraj ಸೋಮಣ್ಣಗೆ ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ? ಸಂಸದ ಬಸವರಾಜ್

ಬೆಂಗಳೂರು : ಎರಡು ವಿಧನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತ ಮಾಜಿ ಸಚಿವ ವಿ ಸೋಮಣ್ಣನಿಗೆ ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವ ಚಿಂತನೆ ಆರಂಭವಾಗಿದೆ

ಸಂಸದ ಜಿಎಸ್ ಬಸವರಾಜು ಅವರೇ ಈ ಗುಟ್ಟು ಬಿಚ್ಚಿಟ್ಟು ಕೂತಹಲ ಮೂಡಿಸುವಂತೆ ಮಾಡಿದ್ದಾರೆ.

ತುಮಕೂರಿನಲ್ಲಿ ನಡೆದ ವೀರಶೈವ ಸಮಾಜದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಂಸದ ಬಸವರಾಜು ನನಗೆ ವಯಸ್ಸಾದ ಕಾರಣ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ. ಮುಂದಿನ ಚುನಾವಣೆಗೆ ನಮ್ಮ ಸಮುದಾಯದವರೇ ಆದ ವಿ ಸೋಮಣ್ಣಗೆ ಟಿಕೆಟ್ ಕೊಡುತ್ತಾರೆ. ದೆಹಲಿಗೆ ಹೋದಾಗ ನಾನು ಇದನ್ನು ಹೇಳಿದ್ದೇನೆ. ಹೀಗಾಗಿ ಸಮುದಾಯದ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದರು.

ಸಂಸದ ಜಿಎಸ್ ಬಸವರಾಜು ಅವರ ಈ ಮಾತು ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ. ಲೋಕಸಭಾ ಟಿಕೆಟ್ ಬಯಸಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಬಂದಿದ್ದ ಮಾಜಿ ಸಂಸದ ಮುದ್ದಹನುಮೇಗೌಡ, ಲೋಕಸಭಾ ಕ್ಯಾಂಡಿಡೇಟ್ ಎಂದೇ ಬಿಂಬಿಸಿಕೊಂಡಿದ್ದ ಲೇಔಟ್ ಚಿದಾನಂದರಿಗೆ ಸಂಸದರ ಈ ಹೇಳಿಕೆ ನಿದ್ದೆಗೆಡಿಸಿದೆ.ರಾಜ್ಯ ವಿಧಾನಪರಿಷತ್ 3 ಸ್ಥಾನಗಳಿಗೆ ಜೂ.30ರಂದು ಉಪ ಚುನಾವಣೆ ಪ್ರಕಟ

ಮಾಜಿ ಸಚಿವ ಮಾಧುಸ್ವಾಮಿ ಅವರೂ ಲೋಕಸಭೆಗೆ ಸೂಕ್ತ ಎಂದು ಜಿಲ್ಲಾ ಬಿಜೆಪಿಯಲ್ಲಿ ಚರ್ಚೆ ಮಾಡಿದ್ದಾರೆ. ಈ ನಡುವೆ ಜಿಎಸ್ ಬಸವರಾಜು ಅವರ ಹೊಸ ದಾಳಿ ಗೊಂದಲಕ್ಕೆ ಕಾರಣವಾಗಿದೆ.

Share This Article
Leave a comment