ದಾವಣಗೆರೆ: ಜಿಲ್ಲೆಯಲ್ಲಿ ರಜೆ ಹಿನ್ನೆಲೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ದುರದೃಷ್ಟವಶಾತ್ ನೀರುಪಾಲಾಗಿರುವ ಘಟನೆ ಕುರ್ಕಿ ಗ್ರಾಮದ ಬಳಿ ಸಂಭವಿಸಿದೆ.
ದಾವಣಗೆರೆಯ ತುರ್ಚಘಟ್ಟದ ಗುರುಕುಲ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಭಾನುವಾರದ ರಜೆ ಇರುವ ಕಾರಣ ಈಜಾಡಲು ಕುರ್ಕಿ ಗ್ರಾಮದ ಕೆರೆಗೆ ತೆರಳಿದ್ದರು. ಈ ವೇಳೆ, ನೀರಿನ ಆಳ ಮತ್ತು ಅಪ್ರಮತ್ತತೆಯ ಕಾರಣದಿಂದ ಇಬ್ಬರೂ ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ.
ಮೃತರನ್ನು ಯತೀಂದ್ರ (16) ಮತ್ತು ಪಾಂಡು (16) ಎಂದು ಗುರುತಿಸಲಾಗಿದೆ.
ಈ ಘಟನೆ ಸಂಭವಿಸಿದ ನಂತರ, ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದ್ದು, ಇಬ್ಬರಲ್ಲಿ ಒಬ್ಬರ ಶವವನ್ನು ಪತ್ತೆ ಮಾಡಿದ್ದಾರೆ. ಇನ್ನೊಬ್ಬನ ಶವಕ್ಕಾಗಿ ಕಾರ್ಯಾಚರಣೆ ಮುಂದುವರೆದಿದೆ. ಇದನ್ನು ಓದಿ –ಸಚಿನ್ ತೆಂಡೂಲ್ಕರ್‌ಗೆ ಬಿಸಿಸಿಐನ ಕರ್ನಲ್ ಸಿ.ಕೆ. ನಾಯುಡು ಜೀವಮಾನ ಸಾಧನೆ ಪ್ರಶಸ್ತಿ
ಈ ಸಂಬಂಧ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು