ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲ ಎಬ್ಬಿಸಿರುವ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಟ್ರೈಲರ್ ಅಷ್ಟೇ, ಸದ್ಯದಲ್ಲೇ ಇನ್ನಿಬ್ಬರು ಸಚಿವರ ಸಿಡಿ ಬಿಡುಗಡೆಯಾಗಲಿದೆ ಎನ್ನುವ ಚರ್ಚೆಯೂ ಆರಂಭವಾಗಿದೆ.
ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರೆಡೂ ಈ ರೀತಿ ಚರ್ಚೆ ನಡೆಸುತ್ತಿವೆ. ಹಳೇ ಮೈಸೂರು ಭಾಗದ ಒಬ್ಬರು ಮತ್ತು ಉತ್ತರ ಕರ್ನಾಟಕ ಭಾಗದ ಒಬ್ಬ ಸಚಿವರ ಸಿಡಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಆದರೆ ಯಾವಾಗ ಆ ಸಿಡಿಗಳು ಬಿಡುಗಡೆಯಾಗಲಿವೆ ಎನ್ನುವುದರ ಬಗ್ಗೆ ಕುತೂಹಲವಿದೆ, ಭಾರೀ ಚರ್ಚೆಗಳು ಮಾತ್ರ ನಡೆಯುತ್ತಿವೆ.
ನಾಳೆ ರಾಜ್ಯ ಸಚಿವ ಸಂಪುಟದ ಸಭೆ ಇದೆ. ಅದರ ಹಿಂದಿನ ದಿನವೇ ಒಂದು ಮಹತ್ವದ ಬೆಳವಣಿಗೆ ರಾಜ್ಯದಲ್ಲಾಗಿದೆ.
ಸಚಿವ ರಮೇಶ್ ಜಾರಕಿಹೊಳಿ ಅವರು ಸಭೆಗೆ ಬರಲಿದ್ದಾರೆಯೇ ಅಥವಾ ಇಲ್ಲವೇ ಎನ್ನುವುದನ್ನು ಕಾದು ನೋಡಬೇಕಿದೆ.
ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ? : ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ
ರಾಸಲೀಲೆ ಸಿಡಿ ಬಹಿರಂಗವಾಗಿ ತೀವ್ರ ಸಂಚಲನ ಸೃಷ್ಟಿಸಿದೆ.
ಯುವತಿಯೊಬ್ಬಳ ಜೊತೆ ಹೋಟೆಲ್ ಕೋಣೆಯೊಂದರಲ್ಲಿ ರಮೇಶ್ ಜಾರಕಿಹೊಳಿ ಎನ್ನಲಾದ ವ್ಯಕ್ತಿಯೊಬ್ಬರು ಅಶ್ಲೀಲ ಭಂಗಿಯಲ್ಲಿ ಕಾಣಿಸಿಕೊಂಡಿ ರುವ ದೃಶ್ಯ ಸಿಡಿಯಲ್ಲಿದೆ.
ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಎನ್ನುವರು ವಿಡಿಯೋ ಬಹಿರಂಗಗೊಳಿಸಿದ ನಂತರ ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ? ಎನ್ನುವ ಪ್ರಶ್ನೆ ಎದುರಾಗಿದೆ.
ಬಿಜೆಪಿ ಮೂಲಗಳ ಪ್ರಕಾರ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದರಿಂದ ಇಕ್ಕಟ್ಟಿನಲ್ಲಿ ಸಿಲುಕಿರುವ ಸಿಎಂ ಬಿಎಸ್ ವೈ, ರಮೇಶ್ ಜಾರಕಿಹೊಳಿ ರಾಜೀನಾಮೆ ಕೇಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )