January 28, 2026

Newsnap Kannada

The World at your finger tips!

WhatsApp Image 2023 05 10 at 1.57.53 PM

ಮಂಡ್ಯದಲ್ಲಿ ಮೊದಲ ದಿನವೇ ಇಬ್ಬರು ನಾಮಪತ್ರ

Spread the love

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಧಿಸೂಚನೆ ಪ್ರಕಟವಾದ ಮೊದಲ ದಿನ ಇಬ್ಬರು ಉಮೇದುವಾರಿಕೆ ಸಲ್ಲಿಸಿದ್ದಾರೆ.

ಲೋಕಸಭೆ ಚುನಾವಣೆ ವೇಳಾಪಟ್ಟಿಯಂತೆ ಜಿಲ್ಲಾ ಚುನಾವಣಾ ಅಧಿಕಾರಿ ಜಿಲ್ಲಾಧಿಕಾರಿ ಡಾ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ,ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡ ಸ್ವಲ್ಪ ಹೊತ್ತಿನಲ್ಲಿ ಮೊದಲ ನಾಮಪತ್ರ ಸಲ್ಲಿಕೆಯಾಯಿತು.

ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿ ಯೋಗೇಶ್ ಜಿಲ್ಲಾ ಚುನಾವಣಾಧಿಕಾರಿ ಡಾ: ಕುಮಾರ ಅವರಿಗೆ ನಾಮಪತ್ರ ಸಲ್ಲಿಸಿದರು.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಸ್ಪರ್ಧೆ ಬಯಸಿ ಕೀಲಾರ ಗ್ರಾಮದ ಚಂದ್ರಶೇಖರ್ ಕೆ. ಆರ್ ನಾಮಪತ್ರ ಸಲ್ಲಿಸಿದ್ದಾರೆ.ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ

ಮೊದಲ ದಿನದಲ್ಲಿ ಇಬ್ಬರು ಉಮೇದು ವಾರಿಕೆ ಸಲ್ಲಿಸಿರುತ್ತಾರೆ.

error: Content is protected !!