ರಾಜ್ಯದಲ್ಲಿ ಧ್ವಜಾರೋಹಣದ ವೇಳೆ ನಡೆದ ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು. ಬೆಂಗಳೂರಿನ ಮನೆಯಲ್ಲಿ ತಿರಂಗಾ ಹಾರಿಸಲು ಹೋಗಿ ಜಾರಿ ಬಿದ್ದು ಟೆಕ್ಕಿ ಸಾವನ್ನಪ್ಪಿದ್ದಾರೆ.
ಧ್ವಜಾರೋಹಣದ ವೇಳೆ ಕುಸಿದು ಬಿದ್ದು ನಿವೃತ್ತ ಸೈನಿಕ ಸಾವು.
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲ್ಲೂಕಿನ ಕುಟ್ರುಪಾಡಿ ಗ್ರಾಮದ ಹಳೇ ಸ್ಟೇಷನ್ ಅಮೃತಸರೋವರದ ಬಳಿ ಇಂದು ಬೆಳಗ್ಗೆ 75ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಸಂದರ್ಭದಲ್ಲಿ ಏಕಾಏಕಿ ನಿವೃತ್ತಯೋಧ ಗಂಗಾಧರ ಗೌಡ ಎಂಬುವರು ಕುಸಿದು ಬಿದ್ದರು.
ಸ್ಥಳದಲ್ಲಿದ್ದವರು ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಕಾಲು ಜಾರಿ ಬಿದ್ದು ಯುವಕ ಸಾವು :
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಆರ್ಚಕ ನಾರಾಯಣ ಭಟ್ ಅವರ ಪುತ್ರ ವಿಶ್ವಾಸ್ ಕುಮಾರ್ ಮೃತಪಟ್ಟ ದುರ್ದೈವಿ.
ಖಾಸಗಿ ಕಂಪನಿಯ ಉದ್ಯೋಗಿಯಾದ ಇವರು ಹೆಣ್ಣೂರು ಎಚ್‌ಬಿಆರ್ ಬಡಾವಣೆಯ ಐದನೇ ಬ್ಲಾಕ್‌ನಲ್ಲಿ ತಾವು ವಾಸಿಸುತ್ತಿದ್ದ ಕಟ್ಟಡದ ಟೇರಸ್‌ಗೆ ರಾಷ್ಟ್ರಧ್ವಜ ಹಾರಿಸಲೆಂದು ಹೋಗಿದ್ದರು. ಈ ವೇಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ.
- ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
- 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
- ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
More Stories
ಮಂಡ್ಯ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ
4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ – ಬಂಧನ
ಸಮ್ಮೇಳನಾಧ್ಯಕ್ಷ ನಾಡೋಜ ಗೊ.ರು.ಚನ್ನಬಸಪ್ಪರವರಿಗೆ ಅದ್ಧೂರಿ ಸ್ವಾಗತ