ದಕ್ಷಿಣ ಆಫ್ರಿಕಾದಿಂದ ಬಂದವರಲ್ಲಿ ಇಬ್ಬರಿಗೆ ಕೋವಿಡ್ ದೃಢಪಟ್ಟಿದೆ.
ಸೋಂಕಿತರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಅಲ್ಲದೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ.
ದಕ್ಷಿಣ ಆಫ್ರಿಕಾ ಸೇರಿದಂತೆ 10 ಹೈರಿಸ್ಕ್ ದೇಶಗಳ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ಇಡಲಾಗಿದೆ.
10 ದೇಶಗಳಿಂದ ಕಳೆದ ಹತ್ತು ದಿನಗಳಲ್ಲಿ 584 ಜನ ಬಂದಿದ್ದಾರೆ. ಅವರಲ್ಲಿ ದಕ್ಷಿಣ ಆಫ್ರಿಕಾದಿಂದ 94 ಜನ ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದಾರೆ.
ಈ ಪೈಕಿ ಇಬ್ಬರಲ್ಲಿ ಕೊರೊನಾ ಸೊಂಕು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರನ್ನು ಕ್ವಾರಂಟೈನ್ ಮಾಡಿ ನಿಗಾವಹಿಸಲಾಗಿದೆ. ಇಬ್ಬರಿಂದ ಸ್ಯಾಂಪಲ್ಸ್ ಪಡೆದು ರೂಪದ ತಳಿ ಎಂಬುದನ್ನು ಖಾತರಿಪಡಿಸಿಕೊಳ್ಳಲು ಪರೀಕ್ಷೆಗೆ ರವಾನಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಡಿಸಿ ಶ್ರೀನಿವಾಸ್ ತಿಳಿಸಿದ್ದಾರೆ.
ಕೊರೊನಾ ವೈರಸ್ ಹೊಸ ರೂಪಾಂತರಿ “ಓಮಿಕ್ರಾನ್” ವಿಶ್ವವನ್ನು ತಲ್ಲಣಗೊಳಿಸಿದೆ. ಇದೇ ಸಂದರ್ಭದಲ್ಲಿ ಬೆಂಗಳೂರು ಸೇರಿದಂತೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಆಗಿದೆ, ಪ್ರಯಾಣಿಕರ ಮೇಲೆ ನಿಗಾವಹಿಸಲಾಗಿದೆ.
- RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
- ಮುಡಾ ಹಗರಣ: ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್
- ಏಕನಾಥ್ ಶಿಂಧೆ ರಾಜೀನಾಮೆ: ದೇವರ ಮೊರೆ ಹೋದ ಬೆಂಬಲಿಗರು, ಮಹಾಯತಿ ಸರ್ಕಾರ ರಚನೆಗೆ ತಯಾರಿ
- ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ: ಸರ್ಕಾರಿ ಶಾಲಾ ಶಿಕ್ಷಕನ ಬಂಧನ
- ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣದ ಪ್ರಸ್ತಾವನೆ ಸಲ್ಲಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ