ಕಳೆದ ರಾತ್ರಿ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ಅಪಘಾತದಲ್ಲಿ ರಾಜ್ಯದ ಇಬ್ಬರು ಪೋಲಿಸರು, ಚಾಲಕ ಸೇರಿ ಎಂಟು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ ಹಲವಾರು ಮಂದಿ ಗಾಯಗೊಂಡಿದ್ದಾರೆ.
ಬೆಂಗಳೂರಿನಿಂದ ತಿರುಪತಿಗೆ ಹೊರಟಿದ್ದ ಪೋಲಿಸರ ಕಾರೊಂದು ಆಂದ್ರ ಪ್ರದೇಶದ ಚಿತ್ತೂರು ಬಳಿ ಬೆಳಗಿನ ಜಾವ ಮೂರು ಗಂಟೆ ವೇಳೆಗೆ ಡಿವೈಡರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪೊಲೀಸರು ಹಾಗೂ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆಯಲ್ಲಿ ಶಿವಾಜಿನಗರ PSI ಅವಿನಾಶ್, PC ಅನಿಲ್ ಹಾಗೂ ಕಾರು ಚಾಲಕ ಸಾವನ್ನಪ್ಪಿದ್ದಾರೆ. ಕಾನ್ಸ್‌ಟೇಬಲ್ ಶರಣಬಸವ, PSI ದೀಕ್ಷಿತ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಳುಗಳಿಗೆ ವೇಲೂರು CMC ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಂಜಾ ಕೇಸ್ಗೆ ಸಂಬಂಧಿಸಿದಂತೆ ಆರೋಪಿಗಳ ಬಂಧನಕ್ಕಾಗಿ ಶಿವಾಜಿನಗರದ ಓರ್ವ ಎಸ್ಐ, ಪಿಎಸ್ಐ, ಮೂವರು ಪೇದೆಗಳು ಸೇರಿ 6 ಪೊಲೀಸರ ತಂಡ ಆಂಧ್ರ ಪ್ರದೇಶದ ಚಿತ್ತೂರಿಗೆ ಖಾಸಗಿ ಟ್ರ್ಯಾವೆಲ್ಸ್ನಿಂದ ಕಾರನ್ನು ಬಾಡಿಗೆ ಪಡೆದು ತೆರಳಿತ್ತು.
ಈ ಘಟನೆಯಲ್ಲಿ SI ಸೇರಿ ಇತರ ಪೋಲಿಸರಿಗೆ ಗಾಯಗಳಾಗಿವೆ . ಬೆಂಗಳೂರಿನ ಶಿವಾಜಿನಗರ ಪೋಲಿಸ್ ಠಾಣೆಯಲ್ಲಿ ಸಾವನ್ನಪ್ಪಿದ ಇಬ್ಬರು ಪೊಲಿಸರು ಸೇವೆ ಸಲ್ಲಿಸುತ್ತಿದ್ದರು.
ಒಂದೇ ಕುಟುಂಬದ ಐವರು ಸಾವು :
ಕೊಪ್ಪಳದ ಬಳಿ ಸ್ಕಾರ್ಪಿಯೋ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಒಂದೇ ಕುಟುಂಬ 5 ಮಂದಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಭಾನಾಪುರ ಗ್ರಾಮದ ಬಳಿ ನಡೆದಿದೆ.
ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ (62), ಮೃತರ ಸೊಸೆ ಗಿರಿಜಮ್ಮ (45), ಅಣ್ಣನ ಮಕ್ಕಳಾದ ಶಾಂತಮ್ಮ (35), ಪಾರ್ವತಮ್ಮ (32), ಸಂಬಂಧಿ ಕಸ್ತೂರಮ್ಮ (20) ಮೃತ ದುರ್ದೈವಿಗಳಾಗಿದ್ದಾರೆ.
ಯಲಬುರ್ಗಾ ತಾಲೂಕು ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ ಸೇರಿ ಅವರ ಕುಟುಂಬದ 5 ಜನ ದುರ್ಘಟನೆತಲ್ಲಿ ಸಾವನ್ನಪ್ಪಿದ್ದಾರೆ.
ಅಪಘಾತದ ಸಂದರ್ಭದಲ್ಲಿ ಸ್ಕಾರ್ಪಿಯೋ ವಾಹನದಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು 9 ಜನ ಪ್ರಯಾಣಿಸುತ್ತಿದ್ದರು. ಚಾಲಕ ಹರ್ಷವರ್ಧನ, ಮಕ್ಕಳಾದ ಬಸವರಾಜ, ಪುಟ್ಟರಾಜ, ಭೂಮಿಕಾ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಶಿಕ್ಷಕರ ನೇಮಕಾತಿ ಹಗರಣ – W B ಟಿಎಂಸಿ ಸಚಿವ ಪಾರ್ಥ ಚಟರ್ಜಿ ಬಂಧನ
ಕುಟುಂಬಸ್ಥರೆಲ್ಲರೂ ಕೊಪ್ಪಳದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ದೇವಪ್ಪ ಕೊಪ್ಪದ ಮಗ ಶರಣಪ್ಪ ಕೊಪ್ಪದ ಅವರ ಮಗಳ ಬರ್ತ್ಡೇ ಪಾರ್ಟಿ ಮುಗಿಸಿಕೊಂಡು ಗ್ರಾಮಕ್ಕೆ ವಾಪಸ್ ಆಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ
ಲಾರಿಯೊಂದು ಸ್ಕಾರ್ಪಿಯೋ ವಾಹನಕ್ಕೆ ಡಿಕ್ಕಿ ಹೊಡೆದಿರುವ ಗುರುತು ಪತ್ತೆಯಾಗಿದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ