ಮನೆ ಮೇಲೆ ಮರ ಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೂವೆ ಸಮೀಪದ ಕೆ.ತಲಗೂರು ಗ್ರಾಮದಲ್ಲಿ ನಡೆದಿದೆ.ಇದನ್ನು ಓದಿ –ಮೈಸೂರು ಉದ್ಯಮಿಯ ಕೊಲೆ ಕೇಸ್‍ಗೆ ಬಿಗ್ ಟ್ವಿಸ್ಟ್ – ತಂದೆಯನ್ನೇ ಕೊಂದ 16ರ ಮಗ!
ಚಂದ್ರಮ್ಮ, ಸರಿತಾ ಮೃತ ದುರ್ದೈವಿಗಳಾಗಿದ್ದಾರೆ. ಕಾಫಿನಾಡಿನಲ್ಲಿ ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ಮನೆ ಮೇಲೆ ಮರ ಬಿದ್ದಿದ್ದು, ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಜಖಂಗೊಂಡಿದೆ. ಈ ದುರ್ಘಟನೆಯು ಮಹಿಳೆಯರು ರಾತ್ರಿ ಮಲಗಿದ್ದಾಗ ಸಂಭವಿಸಿದೆ.
ಸದ್ಯ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು