ಗಡಿ ಭದ್ರತಾ ಪಡೆ ಸೇವೆಗೆ ಪುತ್ತೂರಿನ ಇಬ್ಬರು ಯುವತಿಯರು ಆಯ್ಕೆ

Team Newsnap
1 Min Read

ದೇಶದ ಗಡಿ ಕಾಯುವ ಸೇವೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮೂಲದ ಇಬ್ಬರು ಯುವತಿಯರು ಆಯ್ಕೆಯಾಗಿದ್ದಾರೆ.

ಕಾಣಿಯೂರಿನ ಕುಮಾರಿ ಯೋಗಿತಾ ಹಾಗೂ ಬಲ್ನಾಡಿನ ಕುಮಾರಿ ರಮ್ಯಾ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದಾರೆ.

ಕಡಬ ತಾಲೂಕು ಕಾಣಿಯೂರಿನ ಯೋಗಿತಾ ಹಾಗೂ ಪುತ್ತೂರು ಹೊರವಲಯ ಬಲ್ನಾಡ್ ಪರಜಾಲ್ ದೇವಸ್ಯದ ರಮ್ಯಾ ಗಡಿ ಭದ್ರತಾ ಪಡೆಗೆ ಆಯ್ಕೆಯಾಗಿದ್ದಾರೆ.

ಯೋಗಿತಾ ಕಾಣಿಯೂರು ಗ್ರಾಮದ ಮಲೆಕೆರ್ಚಿ ಮೇದಪ್ಪ ಗೌಡ ಮತ್ತು ದೇವಕಿ ದಂಪತಿಯ ಪುತ್ರಿ. ಇವರು ಬೊಬ್ಬೆಕೇರಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು ನಂತರ ಕಾಣಿಯೂರಿನಲ್ಲಿ ಪ್ರೌಢಶಿಕ್ಷಣ , ನಿಂತಿಕಲ್ ನಲ್ಲಿ ಪಿಯುಸಿ ಮುಗಿಸಿದ್ದಾರೆ. ಬಳಿಕ ಮಂಗಳೂರಿನ ವಿವಿ ಕಾಲೇಜಿನಲ್ಲಿ ಪದವಿ ಪಡೆದು, ಕೊಣಾಜೆಯ ಮಂಗಳೂರು ವಿವಿಯಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆದಿದ್ದಾರೆ.

ರಮ್ಯಾ ಪುತ್ತೂರು ಹೊರವಲಯ ಬಲ್ನಾಡಿನ ಪದ್ಮಯ್ಯ ಗೌಡ- ತೇಜವತಿ ದಂಪತಿ ಪುತ್ರಿ. ಇವರು ಪುತ್ತೂರು ಕೊಂಬೆಟ್ಟು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರೌಢ ಮತ್ತು ಪಿಯುಸಿ ಶಿಕ್ಷಣ ಮುಗಿಸಿದ್ದಾರೆ. ನಂತರ ವಿವೇಕಾನಂದ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ.

Share This Article
Leave a comment