ಶ್ರೀನಿವಾಸ ಸಾಗರ ಜಲಾಶಯದ ಬಳಿ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ಜರುಗಿದೆ.
ಚಿಕ್ಕಬಳ್ಳಾಪುರ ಮೆಡಿಕಲ್ ಕಾಲೇಜಿನ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಚ್ಚಿದಾನಂದ ಹಾಗೂ ಗೌರಿಬಿದನೂರು ತಾಲೂಕು ರಾಮಚಂದ್ರಪುರ ಗ್ರಾಮದ ನರೇಶ್ ಬಾಬು ಮೃತ ಯುವಕರು.
ಮೆಡಿಕಲ್ ಕಾಲೇಜಿಗೆ ರಜೆ ಹಿನ್ನೆಲೆಯಲ್ಲಿ ಸಚ್ಚಿದಾನಂದ ತನ್ನ 4 ಮಂದಿ ಸ್ನೇಹಿತರೊಂದಿಗೆ ಆಟೋ ಮೂಲಕ ಶ್ರೀನಿವಾಸ ಸಾಗರ ಜಲಾಶಯಕ್ಕೆ ತೆರಳಿದ್ದ. ಈ ವೇಳೆ ಸಚ್ಚಿದಾನಂದ ಜಲಾಶಯದ ಮುಂಭಾಗದ ಬಳಿ ಇರುವ ಹೊಂಡದಲ್ಲಿ ಈಜಲು ಹೋಗಿ, ನೀರಿನಲ್ಲಿ ಮುಳುಗಿದ್ದಾನೆ.
ಸಚ್ಚಿದಾನಂದನ ರಕ್ಷಣೆಗೆ ಹೋಗಿದ್ದ ನರೇಶ್ ಬಾಬು ಕೂಡಾ ಸಚ್ಚಿದಾನಂದನ ಜೊತೆಯಲ್ಲೇ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಜನರಿಗೆ ವಂಚಿಸಿದ ಪ್ರಕರಣ : ಮಂತ್ರಿ ಗ್ರೂಪ್ CMD ಸುಶೀಲ್ ಪಾಂಡುರಂಗ ಬಂಧಿಸಿದ CID
ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಇಬ್ಬರ ಮೃತ ದೇಹಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು