March 15, 2025

Newsnap Kannada

The World at your finger tips!

stone peltation

ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: 8 ಮಂದಿ ಬಂಧನ

Spread the love

ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 8 ಮಂದಿಯನ್ನು ಬಂಧಿಸಿದ್ದಾರೆ.

ಬಂಧಿತರಾದವರು ಶಾಂತಿನಗರದ ಸೈಯದ್ ಸುಹೇಲ್, ಅಯಾನ್ ಬಿನ್ ಜಬೀವುಲ್ಲಾ, ಕಲೀಲ್ ಪಾಷಾ, ಗೌಸಿಯಾ ನಗರದ ಸೈಯದ್ ಸಾದಿಕ್ ಬಿನ್ ನವೀದ್, ಏಜಾಜ್ ಬಿನ್ ಅಬ್ದುಲ್ ವಾಜೀದ್, ರಾಜೀವ್ ನಗರದ ಸಾದಿಕ್ ಬಿನ್ ಖಾಲಿದ್ ಪಾಷಾ, ಅರ್ಬಾಜ್ ಷರೀಫ್ (ಇಕ್ಬಾಲ್ ಶರೀಫ್ ಅವರ ಪುತ್ರ), ಮತ್ತು ಶೋಯಬ್ ಪಾಷಾ (ಮಜೀದ್ ಪಾಷಾ ಅವರ ಪುತ್ರ) ಎಂಬವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಕೆಲ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.

ಫೆಬ್ರವರಿ 10ರ ತಡರಾತ್ರಿ ಉದಯಗಿರಿ ಪೊಲೀಸ್ ಠಾಣೆ ಮೇಲೆ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದು, ಈ ಹಂಗಾಮೆಯಲ್ಲಿ ಇನ್‌ಸ್ಪೆಕ್ಟರ್ ಸೇರಿ 14 ಮಂದಿ ಪೊಲೀಸರು ಗಾಯಗೊಂಡಿದ್ದರು. ಇದಲ್ಲದೇ, 10ಕ್ಕೂ ಹೆಚ್ಚು ಪೊಲೀಸ್ ವಾಹನಗಳಿಗೆ ಹಾನಿಯಾಗಿದೆ.

ಘಟನೆಯ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು.ಇದನ್ನು ಓದಿ –MUDA ಹಗರಣ: ಅಂತಿಮ ತನಿಖಾ ವರದಿ ಐಜಿಪಿಗೆ ಸಲ್ಲಿಕೆ

ಅಲ್ಲದೇ, ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಹಿಡಿಯಲಾದ ವಿಡಿಯೊಗಳನ್ನು ಆಧರಿಸಿ ಆರೋಪಿಗಳ ಗುರುತು ಪತ್ತೆ ಮಾಡಿ, ಬಂಧನಕ್ಕೆ ಮುಂದಾಗಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!