ಮತ್ತೆ ಉದ್ಧವ್‌ ಠಾಕ್ರೆ ಸರ್ಕಾರ ಮರು ಸ್ಥಾಪನೆ ಸಾಧ್ಯವಿಲ್ಲ – ಸುಪ್ರಿಂ : ಶಿಂಧೆ ಬಣಕ್ಕೆ ರಿಲೀಫ್

Team Newsnap
1 Min Read

ನವದೆಹಲಿ : ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಮತ್ತು ಅವರ ಬಣದ 15 ಶಾಸಕರನ್ನು ಅನರ್ಹತೆಗೊಳಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಸುಪ್ರೀಂನ ಈ ತೀರ್ಪಿನಿಂದ ಸಿಎಂ ಶಿಂಧೆ ಬಣಕ್ಕೆ ದೊಡ್ಡ ರಿಲೀಫ್‌ ಸಿಕ್ಕಿದೆ. ಠಾಕ್ರೆ ಸರ್ಕಾರವನ್ನು ಮರುಸ್ಥಾಪಿಸುವ ವಿನಂತಿಯನ್ನು ಸಹ ಸುಪ್ರೀಂ ತಿರಸ್ಕರಿಸಿದೆ.

ಉದ್ದವ್ ಠಾಕ್ರೆ ಫ್ಲೋರ್‌ ಟೆಸ್ಟ್ ಎದುರಿಸಿಲ್ಲ. ಅವರು ರಾಜೀನಾಮೆ ನೀಡಿದ ಕಾರಣ ಯಥಾಸ್ಥಿತಿಯನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ. ಹೀಗಾಗಿ ರಾಜ್ಯಪಾಲರು ಬಿಜೆಪಿಯನ್ನು ಸರ್ಕಾರ ರಚನೆಗೆ ಕರೆದಿರುವುದು ಸರಿಯಾಗಿದೆ ಎಂದು ಕೋರ್ಟ್‌ ಸ್ಪಷ್ಟಪಡಿಸಿದೆ.

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಸ್ಪೀಕರ್‌ ನಡೆಗೆ ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿದೆ.ಮದ್ದೂರು ಬಳಿ ಬೈಪಾಸ್ ರಸ್ತೆಗೆ ಬಿದ್ದ ವಿದ್ಯುತ್ ಕಂಬ: ತಪ್ಪಿದ ಭಾರಿ ಅನಾಹುತ

ಉದ್ಧವ್‌ ಠಾಕ್ರೆ ಅವರು ಬಹುಪಾಲು ಶಾಸಕರ ಬೆಂಬಲವನ್ನು ಕಳೆದುಕೊಂಡಿದ್ದಾರೆ ಎಂದು ತೀರ್ಮಾನಿಸುವಲ್ಲಿ ರಾಜ್ಯಪಾಲರು ತಪ್ಪು ಎಸಗಿದ್ದಾರೆ ಎಂದು ಶಿಂಧೆ ಬಣಕ್ಕೆ ಸಹಾಯ ಮಾಡುವ ನಿರ್ಧಾರಗಳನ್ನು ತೆಗೆದುಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ನ್ಯಾಯಾಲಯ ಖಂಡಿಸಿತು.

Share This Article
Leave a comment