ರಾಜ್ಯದಲ್ಲಿ ಯುಗಾದಿ ದಿನವೂ ಕೊರೋನಾ ಅಬ್ಬರಿಸಿದೆ. ಇಂದು 8,778 ಜನರಿಗೆ ಕೊರೊನಾ ಸೋಂಕು ತಗುಲಿದೆ. 67 ಜನ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ 5,500 ಜನರಿಗೆ ಸೋಂಕು ತಗುಲಿದೆ. ಸಿಲಿಕಾನ್ ಸಿಟಿಯಲ್ಲಿ 55 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 78,617ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,83,647ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಇಂದು 6,079 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ವರೆಗೆ ಒಟ್ಟು 9,92,003 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ ?
ಬಾಗಲಕೋಟೆ 73, ಬಳ್ಳಾರಿ 168, ಬೆಳಗಾವಿ 42, ಬೆಂಗಳೂರು ಗ್ರಾಮಾಂತರ 163, ಬೆಂಗಳೂರು ನಗರ 5,500, ಬೀದರ್ 198, ಚಾಮರಾಜನಗರ 51, ಚಿಕ್ಕಬಳ್ಳಾಪುರ 114, ಚಿಕ್ಕಮಗಳೂರು 19, ಚಿತ್ರದುರ್ಗ 45, ದಕ್ಷಿಣ ಕನ್ನಡ 142, ದಾವಣಗೆರೆ 66, ಧಾರವಾಡ 132, ಗದಗ 30, ಹಾಸನ 150, ಹಾವೇರಿ 17, ಕಲಬುರಗಿ 290, ಕೊಡಗು 14, ಕೋಲಾರ 67, ಕೊಪ್ಪಳ 29, ಮಂಡ್ಯ 114, ಮೈಸೂರು 492, ರಾಯಚೂರು 80, ರಾಮನಗರ 37, ಶಿವಮೊಗ್ಗ 95, ತುಮಕೂರು 350, ಉಡುಪಿ 75, ಉತ್ತರ ಕನ್ನಡ 75, ವಿಜಯಪುರ 105 ಹಾಗೂ ಯಾದಗಿರಿಯಲ್ಲಿ 45 ಪ್ರಕರಣಗಳು ವರದಿಯಾಗಿವೆ.
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
- ಮುಖ್ಯಮಂತ್ರಿ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್
- ₹5.50 ಲಕ್ಷ ಮೌಲ್ಯದ ಡ್ರಗ್ಸ್ ಜಪ್ತಿ, ಇಬ್ಬರು ಬಂಧನ
More Stories
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ
ಮೈಸೂರಿನ ಸರ್ಕಾರಿ ಶಾಲೆಯ ಜಾಗ ವಕ್ಫ್ ಆಸ್ತಿಯಾಯ್ತು – ಸಿಎಂಗೆ ಪ್ರತಾಪ್ ಸಿಂಹ ಟಾಂಗ್