ಉಕ್ರೇನ್ ಯುದ್ಧದಲ್ಲಿ ರಷ್ಯಾದ ಜನರಲ್ ವಿಟಾಲಿ ಗೆರಾಸಿಮೊವ್ ಸಾವನ್ನಪ್ಪಿದ್ದಾರೆ. ಹಿರಿಯ ಕಮಾಂಡರ್ ಕಳೆದುಕೊಂಡು ರಷ್ಯಾಗೆ ಮತ್ತೊಂದು ದೊಡ್ಡ ನಷ್ಟವುಂಟಾಗಿದೆ ಎಂದು ಉಕ್ರೇನ್ ತಿಳಿಸಿದೆ.
ಮೇಜರ್ ಜನರಲ್ ವಿಟಾಲಿ ಗೆರಾಸಿಮೊವ್ ರಷ್ಯಾದ ಕೇಂದ್ರ ಮಿಲಿಟರಿ ಜಿಲ್ಲೆಯ 41 ನೇ ಸೈನ್ಯದ ಮೊದಲ ಉಪ ಕಮಾಂಡರ್ ಆಗಿದ್ದರು.
ಎರಡನೇ ಚೆಚೆನ್ ಯುದ್ಧ ಮತ್ತು ಸಿರಿಯಾದಲ್ಲಿ ನಡೆದ ರಷ್ಯಾದ ಮಿಲಿಟರಿ ಕಾರ್ಯಾಚರಣೆಗಳಲ್ಲಿ ವಿಟಾಲಿ ಗೆರಾಸಿಮೊವ್ ಅವರ ಪಾತ್ರವಿತ್ತು. ಅವರಿಗೆ 2014 ರಲ್ಲಿ ‘ಕ್ರೈಮಿಯಾ ಹಿಂದಿರುಗುವಿಕೆಗಾಗಿ ಪದಕವನ್ನು ನೀಡಲಾಗಿತ್ತು.
ಈಗಾಗಲೇ ರಷ್ಯಾದ ಅನೇಕ ಹಿರಿಯ ರಕ್ಷಣಾ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ. ರಷ್ಯಾ ಸೈನ್ಯದಲ್ಲಿನ ಸಂವಹನ ಮತ್ತು ಘಟಕಗಳ ಸ್ಥಳಾಂತರಿಸುವಿಕೆಯೊಂದಿಗೆ ಗಮನಾರ್ಹ ಸಮಸ್ಯೆಗಳನ್ನು ಸೂಚಿಸುತ್ತದೆ ಎಂದು ಉಕ್ರೇನಿಯನ್ ರಕ್ಷಣಾ ಸಚಿವಾಲಯ ಹೇಳಿದೆ.
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ