ಸಾಲ ಬಾಧೆ ತಾಳಲಾರದೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ

Team Newsnap
1 Min Read

ಸಾಲ ಬಾಧೆ ತಾಳಲಾರದೆ ಓರ್ವ ಯುವಕ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಕಲ್ಕಟ್ಟೆ ಡ್ಯಾಂ ಬಳಿ ನಡೆದಿದೆ.

ಸಚಿನ್ (24) ಮೃತ ಯುವಕ ಖಾಸಗಿ ಫೈನಾನ್ಸ್ ಕಂಪನಿಯಲ್ಲಿ‌ ಕೆಲಸ ಮಾಡಿಕೊಂಡಿದ್ದ. ಸಾಲದ ಸುಳಿಗೆ ಸಿಲುಕಿ ಮಾನಸಿಕ ಒತ್ತಡ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೂವರು ಸ್ನೇಹಿತರಿಗೆ ಮೆಸೇಜ್ ಮಾಡಿದ್ದಾನೆ, ಆ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸ್ಥಳಕ್ಕೆ ಗುಂಡ್ಲುಪೇಟೆ ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನು ಹೊರ ತೆಗೆದರು.ಈ ಘಟನೆ ಕುರಿತಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment