ಡಿಜಿಟಲ್ ಕರೆನ್ಸಿಯನ್ನು ಪರಿಚಯಿಸೋದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್ನಲ್ಲಿ ಪ್ರಕಟಿಸಿದ್ದಾರೆ.
ಐಟಿ ರಿಟರ್ನ್ಸ್ ಫೈಲ್ ಮಾಡಲು ಹೊಸ ನಿಯಮ ಕೂಡ ಜಾರಿಯಾಗಲಿದೆ. 2 ವರ್ಷಗಳ ಅವಧಿಯಲ್ಲಿ ಐಟಿ ರಿಟರ್ನ್ಸ್ ಅಪ್ಡೇಟ್ ಮಾಡಬಹುದು ಎಂದು ತಿಳಿಸಿದ್ದಾರೆ.
ಕ್ರಿಪ್ಟೋ ಕರೆನ್ಸಿಗೆ ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ, ಕ್ರಿಪ್ಟೋ ಕರೆನ್ಸಿಗಳ ಲಾಭದ ಮೇಲೆ 30% ತೆರಿಗೆ ಘೋಷಣೆ ಮಾಡಿದೆ.
ಪಿಎಂ ಇ-ವಿದ್ಯಾ ಡಿಜಿಟಲ್ ಯುನಿವರ್ಸಿಟಿ ಲಾಂಚ್ ಮಾಡುವ ಭರವಸೆಯನ್ನು ನಿರ್ಮಲಾ ಸೀತಾರಾಮನ್ ನೀಡಿದ್ದಾರೆ.
ನೈಸರ್ಗಿಕ, ಶೂನ್ಯ ಬಜೆಟ್ ಮತ್ತು ಸಾವಯುವ ಕೃಷಿ ಹಾಗೂ ಆಧುನಿಕ ಕೃಷಿಯ ಅಗತ್ಯತೆಯನ್ನ ಪೂರೈಸಲು ಕೃಷಿ ವಿಶ್ವ ವಿದ್ಯಾಲಯಗಳಲ್ಲಿನ ಪಠ್ಯಕ್ರಮವನ್ನು ಪರಿಶೀಲಿಸೋದಾಗಿ ಬಜೆಟ್ನಲ್ಲಿ ತಿಳಿಸಲಾಗಿದೆ.
ಕೊರೊನಾ ದೇಶದಲ್ಲಿ ತಾಂಡವಾಡುತ್ತಿದೆ. ಕೊರೊನಾ ಸಾಂಕ್ರಾಮಿಕ ಹೆಚ್ಚಾಗುತ್ತಿದ್ದಾಗ ಶಾಲಾ-ಕಾಲೇಜುಗಳು ಬಂದ್ ಆಗಿರುತ್ತವೆ. ಇದನ್ನ ಅರಿತ ಕೇಂದ್ರ ಸರ್ಕಾರ ಒನ್ ಕ್ಲಾಸ್ ಒನ್ ಟಿವಿ ಚಾನಲ್ ಪರಿಚಯಿಸುವ ಬಗ್ಗೆ ನಿರ್ಮಲಾ ಸೀತಾರಾಮನ್ ಪ್ರಸ್ತಾಪ ಮಾಡಿದ್ದಾರೆ.
ಪ್ರಾದೇಶಿಕ ಭಾಷೆಗಳಲ್ಲಿ ಪಾಠ ಪ್ರಸಾರವಾಗಲಿದೆ. 1 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಇಲ್ಲಿ ಪಾಠ ಮಾಡಲಾಗುತ್ತದೆ. PM eVidya ಯೋಜನೆ ಅಡಿಯಲ್ಲಿ 12 ಚಾನಲ್‌ಗಳಿಂದ 200 ಚಾನಲ್‌ಗಳವರೆಗೆ ವಿಸ್ತರಿಸೋದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ