ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ ನಲ್ಲಿ ಮಂಗಳವಾರ 2022-23ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದರು.
ಸತತ 4ನೇ ಬಾರಿಗೆ ನಿರ್ಮಲಾ ಸೀತಾರಾಮನ್ ಬಜೆಟ್ ಹಲವಾರು ಯೋಜನೆಗಳನ್ನು ಪ್ರಕಟಿಸಿದರು.
ನಾವೀಗ ಒಮಿಕ್ರಾನ್ ಸಂಕಷ್ಟ ಕಾಲದಲ್ಲಿದ್ದೇವೆ. ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ, ಆದ್ರೆ ಕಡಿಮೆ ತೊಂದರೆ ಆಗುತ್ತಿದೆ.
ಸಬ್ ಕಾ ವಿಕಾಸ್ನೊಂದಿಗೆ ನಮ್ಮ ಬೆಳವಣಿಗೆಯನ್ನು ಮುಂದುವರಿಸುತ್ತೇವೆ. ನಾವು ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವವನ್ನ ಆಚರಿಸುತ್ತೇದ್ದೇವೆ. ಸರ್ಕಾರ ಅಮೃತ ಕಾಲದ ಗುರಿಗಳನ್ನ ಸಾಧಿಸಬೇಕೆಂಬ ಬಗ್ಗೆ ಗಮನ ಹರಿಸಿದೆ. 2014ರಿಂದ ನಮ್ಮ ಸರ್ಕಾರ ಜನರ ಅಭಿವೃದ್ಧಿ ಬಗ್ಗೆ ಗಮನ ಹರಿಸುತ್ತಿದೆ. ಪ್ರಮುಖವಾಗಿ ಬಡವರ ಏಳಿಗೆಗೆ ನಮ್ಮ ಸರ್ಕಾರ ಶ್ರಮಿಸುತ್ತಿದೆ.
ಸರ್ಕಾರ ಬಡವರ ಅಭಿವೃದ್ಧಿಗೆ ಹಲವು ಯೋಜನೆಗಳನ್ನ ಜಾರಿಗೆ ತಂದಿದೆ. ಮುಂದಿನ 25 ವರ್ಷಗಳ ಅಮೃತ ಕಾಲಕ್ಕೆ ಉತ್ತೇಜನ ನೀಡುವ ಬಜೆಟ್ ಇದಾಗಿದೆ ಎಂದರು.
ಕಳೆದ ವರ್ಷದ ಬಜೆಟ್ನ ಯೋಜನೆಗಳಲ್ಲಿ ಸಾಕಷ್ಟು ಬೆಳವಣಿಗೆಯಾಗಿದೆ. 60 ಲಕ್ಷ ಉದ್ಯೋಗ ಸೃಷ್ಟಿಯ ಆತ್ಮ ನಿರ್ಭರ್ ಭಾರತ್ಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಇನ್ನೂ 35 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ.
ಎಲ್ಐಸಿಯ ಐಪಿಒ ಶೀಘ್ರದಲ್ಲೇ ಬರುವ ನಿರೀಕ್ಷೆಯನ್ನ ಇರಿಸಿಕೊಳ್ಳಲಾಗಿದೆ. ಈ ಬಜೆಟ್‌ನಲ್ಲಿ ಮುಂದಿನ 25 ವರ್ಷಗಳ ಬ್ಲೂಪ್ರಿಂಟ್ನ ತಯಾರಿಸಲಾಗಿದೆ.
ಏರ್ ಇಂಡಿಯಾದಲ್ಲಿದ್ದ ಹೂಡಿಕೆಯನ್ನ ಯಶಸ್ವಿಯಾಗಿ ಹಿಂಪಡೆಯಲಾಗಿದೆ. ಪಿಎಂ ಗತಿಶಕ್ತಿಯಿಂದ ದೇಶದ ಆರ್ಥಿಕತೆ ಇನ್ನಷ್ಟು ಗಟ್ಟಿಗೊಳ್ಳುತ್ತಿದೆ. ಎನರ್ಜಿ ಪರಿವರ್ತನೆ, ಜಲವಾಯು ಕಾರ್ಯಗಳ ಯೋಜನೆಗೆ ಉತ್ತಜೇನ ನೀಡುವ ಗುರಿ ಇದೆ. 2023ರ ವರ್ಷವನ್ನ ಸಿರಿ ಧಾನ್ಯಗಳ ವರ್ಷ ಅಂತ ಘೋಷಿಸಲಾಗಿದೆ. ರಸಾಯನ ಮುಕ್ತ, ನೈಸರ್ಗಿಕ ಕೃಷಿಗೆ ಉತ್ತೇಜನ ನೀಡಲಾಗುತ್ತದೆ ಎಂದರು.
ಬಜೆಟ್ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಪ್ರಮುಖ ಅಂಶಗಳು
1)ಈ ಆರ್ಥಿಕ ವರ್ಷದಲ್ಲಿ 9.2% ಬೆಳವಣಿಗೆಯನ್ನು ನಿರೀಕ್ಷಿಸುತ್ತಿದೆ
2) ಸರ್ಕಾರವು ನಾಗರಿಕ-ಕೇಂದ್ರಿತ ಸುಧಾರಣೆಗಳ ಮೇಲೆ ಕೇಂದ್ರೀಕರಿಸಿದೆ
3) ಮುಂದಿನ 25 ವರ್ಷಗಳಲ್ಲಿ ಆರ್ಥಿಕತೆಯನ್ನು ಸುಧಾರಿಸುವ ಗುರಿಯನ್ನು ಈ ಬಜೆಟ್ ಹೊಂದಿದೆ
4) 2021-22ರ ಬಜೆಟ್‌ನಲ್ಲಿ ಸಾರ್ವಜನಿಕ ಹೂಡಿಕೆ ಮತ್ತು ಬಂಡವಾಳ ವೆಚ್ಚದಲ್ಲಿ ತೀವ್ರ ಏರಿಕೆ ಕಂಡುಬಂದಿದೆ…
5) ಈ ಬಜೆಟ್ (2022-23) ಯುವಕರು, ಮಹಿಳೆಯರು, ರೈತರು, ಎಸ್‌ಸಿ, ಎಸ್‌ಟಿ ವರ್ಗಕ್ಕೆ ಸಹಾಯವಾಗಲಿದೆ,
6) ಪ್ರಧಾನಮಂತ್ರಿ ಗತಿ ಶಕ್ತಿ ಮಾಸ್ಟರ್ ಪ್ಲಾನ್ ಮಾರ್ಗದರ್ಶನ ನೀಡಲಿದೆ.
7)ಶೀಘ್ರದಲ್ಲೇ LICಯಿಂದ ಬಂಡವಾಳ ಹಿಂತೆಗೆತ.
9) 100 PM ಗತಿ ಶಕ್ತಿ ಕಾರ್ಗೋ ಟರ್ಮಿನಲ್‌ಗಳನ್ನು ಮುಂದಿನ 3 ವರ್ಷಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಮತ್ತು ಮೆಟ್ರೋ ವ್ಯವಸ್ಥೆಯನ್ನು ನಿರ್ಮಿಸಲು ನವೀನ ಮಾರ್ಗಗಳ ಅನುಷ್ಠಾನ ಮಾಡಲಾಗುವುದು.
10) ಮುಂದಿನ 3 ವರ್ಷಗಳಲ್ಲಿ ಉತ್ತಮ ದಕ್ಷತೆಯೊಂದಿಗೆ 400 ಹೊಸ ತಲೆಮಾರಿನ ವಂದೇ ಭಾರತ್ ರೈಲುಗಳನ್ನು ತರಲಾಗುವುದು.
11) ಮುಂದಿನ ಐದು ವರ್ಷಗಳಲ್ಲಿ 60 ಲಕ್ಷ ಹೊಸ ಉದ್ಯೋಗಗಳು ಮತ್ತು 30 ಲಕ್ಷ ಕೋಟಿ ಹೆಚ್ಚುವರಿ ಉತ್ಪಾದನೆಯನ್ನು ಸೃಷ್ಟಿಸುವ ಸಾಮರ್ಥ್ಯದೊಂದಿಗೆ, ಆತ್ಮನಿರ್ಭರ ಭಾರತವನ್ನು ಸಾಧಿಸಲು ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ (PLI) ಯೋಜನೆಯು ಅತ್ಯುತ್ತಮ ಪ್ರತಿಕ್ರಿಯೆಯನ್ನು ಪಡೆದಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ