ರಾಷ್ಟ್ರೀಯ

ರಿಸರ್ವ್ ಬ್ಯಾಂಕಿನಿಂದಲೇ ಡಿಜಿಟಲ್ ಕರೆನ್ಸಿ – ಕ್ರಿಪ್ಟೋ ಲಾಭದ ಮೇಲೆ ಶೇ 30 ರಷ್ಟು ತೆರಿಗೆ : ನಿರ್ಮಲಾ ಸೀತಾರಾಮನ್

ಡಿಜಿಟಲ್ ಕರೆನ್ಸಿಯನ್ನು ಪರಿಚಯಿಸೋದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿಯ ಬಜೆಟ್​ನಲ್ಲಿ ಪ್ರಕಟಿಸಿದ್ದಾರೆ.

ಐಟಿ ರಿಟರ್ನ್ಸ್ ಫೈಲ್ ಮಾಡಲು ಹೊಸ ನಿಯಮ ಕೂಡ ಜಾರಿಯಾಗಲಿದೆ. 2 ವರ್ಷಗಳ ಅವಧಿಯಲ್ಲಿ ಐಟಿ ರಿಟರ್ನ್ಸ್ ಅಪ್​ಡೇಟ್ ಮಾಡಬಹುದು ಎಂದು ತಿಳಿಸಿದ್ದಾರೆ.

ಕ್ರಿಪ್ಟೋ ಕರೆನ್ಸಿಗೆ ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ, ಕ್ರಿಪ್ಟೋ ಕರೆನ್ಸಿಗಳ ಲಾಭದ ಮೇಲೆ 30% ತೆರಿಗೆ ಘೋಷಣೆ ಮಾಡಿದೆ.

ಪಿಎಂ ಇ-ವಿದ್ಯಾ ಡಿಜಿಟಲ್ ಯುನಿವರ್ಸಿಟಿ ಲಾಂಚ್ ಮಾಡುವ ಭರವಸೆಯನ್ನು ನಿರ್ಮಲಾ ಸೀತಾರಾಮನ್ ನೀಡಿದ್ದಾರೆ.

ನೈಸರ್ಗಿಕ, ಶೂನ್ಯ ಬಜೆಟ್​ ಮತ್ತು ಸಾವಯುವ ಕೃಷಿ ಹಾಗೂ ಆಧುನಿಕ ಕೃಷಿಯ ಅಗತ್ಯತೆಯನ್ನ ಪೂರೈಸಲು ಕೃಷಿ ವಿಶ್ವ ವಿದ್ಯಾಲಯಗಳಲ್ಲಿನ ಪಠ್ಯಕ್ರಮವನ್ನು ಪರಿಶೀಲಿಸೋದಾಗಿ ಬಜೆಟ್​ನಲ್ಲಿ ತಿಳಿಸಲಾಗಿದೆ.

ಕೊರೊನಾ ದೇಶದಲ್ಲಿ ತಾಂಡವಾಡುತ್ತಿದೆ. ಕೊರೊನಾ ಸಾಂಕ್ರಾಮಿಕ ಹೆಚ್ಚಾಗುತ್ತಿದ್ದಾಗ ಶಾಲಾ-ಕಾಲೇಜುಗಳು ಬಂದ್ ಆಗಿರುತ್ತವೆ. ಇದನ್ನ ಅರಿತ ಕೇಂದ್ರ ಸರ್ಕಾರ ಒನ್ ಕ್ಲಾಸ್ ಒನ್ ಟಿವಿ ಚಾನಲ್ ಪರಿಚಯಿಸುವ ಬಗ್ಗೆ ನಿರ್ಮಲಾ ಸೀತಾರಾಮನ್ ಪ್ರಸ್ತಾಪ ಮಾಡಿದ್ದಾರೆ.

ಪ್ರಾದೇಶಿಕ ಭಾಷೆಗಳಲ್ಲಿ ಪಾಠ ಪ್ರಸಾರವಾಗಲಿದೆ. 1 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಇಲ್ಲಿ ಪಾಠ ಮಾಡಲಾಗುತ್ತದೆ. PM eVidya ಯೋಜನೆ ಅಡಿಯಲ್ಲಿ 12 ಚಾನಲ್‌ಗಳಿಂದ 200 ಚಾನಲ್‌ಗಳವರೆಗೆ ವಿಸ್ತರಿಸೋದಾಗಿ ಕೇಂದ್ರ ಸರ್ಕಾರ ತಿಳಿಸಿದೆ.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024