ಕೇಂದ್ರ ಜಲ ಶಕ್ತಿ ಸಚಿವ ಶಿಖಾವತ್ ಭೇಟಿ ಮಾಡಿದ ಮಂಡ್ಯ ಸಂಸದೆ: ನೀರಿನ ಸಮಸ್ಯೆ ಬಗ್ಗೆ ಮಾಹಿತಿ

Team Newsnap
1 Min Read

ಬೆಂಗಳೂರು: ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶಿಖಾವತ್ ರನ್ನು ಭೇಟಿ ಮಾಡಿದ ಮಂಡ್ಯ ಸಂಸದೆ ಸುಮಲತಾ, ಕರ್ನಾಟಕ ಮತ್ತು ಮಂಡ್ಯ ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಿಂದ ಬರದ ಪರಿಸ್ಥಿತಿಯನ್ನು ಮನವರಿಕೆ ಮಾಡಿ , ನೀರಿನ ಕೊರತೆ ಬಗ್ಗೆ ಮಾಹಿತಿ ನೀಡಿದರು.

ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಕುಡಿಯುವ ನೀರಿಗೆ ತೊಂದರೆಯಾಗಿದೆ ಎಂದು ಸುಮಲತಾ ಭೇಟಿ ವೇಳೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಇದನ್ನು ಓದಿ –ಕರ್ನಾಟಕಕ್ಕೆ ಮತ್ತೆ ಶಾಕ್ – ತ.ನಾಡಿಗೆ ಪ್ರತಿ ನಿತ್ಯ 5,000 ಕ್ಯೂಸೆಕ್ ನೀರು ಹರಿಸಲು ಆದೇಶ

ಸಂಸದರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸಚಿವರು, ಮುಂದಿನ ವಾರದೊಳಗೆ ರಾಜ್ಯದಲ್ಲಿ ಬರ ಅಧ್ಯಯನ ನಡೆಸಲು ಕೇಂದ್ರದ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ರಚಿಸಿ ಬರಪೀಡಿತ ಪ್ರದೇಶಗಳಿಗೆ ಕಳುಹಿಸುವುದಾಗಿ ಆಶ್ವಾಸನೆ ನೀಡಿದರು.

Share This Article
Leave a comment