ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗಾಳಿಸುದ್ದಿ ನಡುವೆಯೇ ಕಳೆದ ಮಧ್ಯರಾತ್ರಿಯ ವೇಳೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಚಾಣಕ್ಯ ಅಮಿತ್ ಶಾ ದೆಹಲಿಯಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಬೆಂಗಳೂರು ಪ್ರವಾಸದ ಕಾರ್ಯಕ್ರಮ :
- ಮೇ 3ರಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿರುವ ಕೇಂದ್ರ ಸಚಿವ ಅಮಿತ್ ಶಾ ಬಸವ ಜಯಂತಿ ಪ್ರಯುಕ್ತ ಅಣ್ಣ ಬಸವಣ್ಣರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
- ನೃಪತುಂಗ ವಿಶ್ವವಿದ್ಯಾಲಯದ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸುವ ಮೂಲಕ ವಿವಿಗೆ ಅಧಿಕೃತವಾಗಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.
- ಬಳ್ಳಾರಿಯ ವಿಧಿವಿಜ್ಞಾನ ಪ್ರಯೋಗಾಲಯವನ್ನು ವರ್ಚ್ಯುಯಲ್ ಆಗಿ ಉದ್ಘಾಟಿಸಲಿದ್ದಾರೆ.
- ಇ ಬೀಟ್ ಅಪ್ಲಿಕೇಷನ್ ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 12 ರ ನಂತರ ಸಾತನೂರು ಗ್ರಾಮಕ್ಕೆ ತೆರಳಿ ನ್ಯಾಟ್ ಗ್ರಿಡ್ ಕ್ಯಾಂಪಸ್
ಮಧ್ಯಾಹ್ನ 2.30ರ ನಂತರ ನಡೆಯಲಿರುವ ರಾಜ್ಯ ಬಿಜೆಪಿ ಪದಾಧಿಕಾರಿಗಳು, ಕೋರ್ ಸಮಿತಿ ಮತ್ತು ಮೋರ್ಚಾ ಅಧ್ಯಕ್ಷರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ವಿಶೇಷವೆಂದರೆ ಈ ಸಭೆಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ
ಆಗಮಿಸಲಿದ್ದಾರೆ.
- ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿಯ ಅಧಿಕೃತ ಕಾರ್ಯಕ್ರಮವೊಂದರಲ್ಲಿ ಈಶ್ವರಪ್ಪ ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ನಾಯಕತ್ವ ಬದಲಾವಣೆ ಸುದ್ದಿ ಓಡಾಡುತ್ತಿರುವಾಗ ಅಮಿತ್ ಶಾರನ್ನು ಭೇಟಿ ಮಾಡುತ್ತಿದ್ದಾರೆ.
- ಸಂಜೆ 5.30ರ ವೇಳೆಗೆ ಬೆಂಗಳೂರಿನಲ್ಲಿ ನಡೆದಿರುವ ಖೇಲೋ ಇಂಡಿಯಾ ವಿಶ್ವವಿದ್ಯಾಲಯಗಳ ಗೇಮ್ಸ್ 2021 ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಂಠೀರವ ಕ್ರೀಡಾಂಗಣಕ್ಕೆ ಅಮಿತ್ ಶಾ
ಬರಲಿದ್ದಾರೆ. - ಸಚಿವರು ತಮ್ಮ ಕ್ಷೇತ್ರದಲ್ಲಿ ಜನ ಪರ ಕೆಲಸ, ಭ್ರಷ್ಟ ರಹಿತ ಆಡಳಿತ, ಪಕ್ಷದ ವರ್ಚಸ್ಸು ಹೆಚ್ಚಿಸುವ ಕಾರ್ಯಕ್ರಮ ಸೇರಿದಂತೆ ಹಲವು ಮಾನದಂಡ ಇಟ್ಟುಕೊಂಡು ಮಾಹಿತಿ ಸಂಗ್ರಹಿಸಲಿದ್ದಾರೆ.
- ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 150 ಸ್ಥಾನಗಳಲ್ಲಿ ಜಯ ಸಾಧಿಸಬೇಕು.
40 ಮಂದಿ ಹೊಸಬರಿಗೆ ಟಿಕೆಟ್ ನೀಡಿ ಮುಂದಿನ ತಲೆಮಾರಿಗೆ ಬಿಜೆಪಿ ಪಕ್ಷವನ್ನು ಮುನ್ನೆಡೆಸುವ ಯುವಕರಿಗೆ ಆದ್ಯತೆ ನೀಡಬೇಕು ಎಂಬುದು ಹೈಕಮಾಂಡ್ ನಿಲುವಾಗಿದೆ. ಚುನಾವಣೆ ಮುಂದಿಟ್ಟುಕೊಂಡು ಜಾತಿವಾರು ಲೆಕ್ಕಾಚಾರದಂತೆ ರಾಜ್ಯಾಧ್ಯಕ್ಷರನ್ನು ನೇಮಿಸುವ ಸಾಧ್ಯತೆಯಿದೆ. ಅರವಿಂದ್ ಬೆಲ್ಲದ್, ಸಿಟಿ ರವಿ ಈ ಸ್ಥಾನದ ರೇಸ್ ನಲ್ಲಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ