ನಾಯಕತ್ವ ಬದಲಾವಣೆಯತ್ತ ಗಮನ : ರಾಜ್ಯಕ್ಕೆ ರಾತ್ರಿ ಕೇಂದ್ರ ಮಂತ್ರಿ ಅಮಿತ್ ಶಾ ಆಗಮನ

Team Newsnap
2 Min Read
Amit Shah is ready to make a house in Bangalore ಬೆಂಗಳೂರಲ್ಲಿ ಮನೆ ಮಾಡಲು ಅಮಿತ್ ಷಾ ಸಿದ್ದತೆ

ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗಾಳಿಸುದ್ದಿ ನಡುವೆಯೇ ಕಳೆದ ಮಧ್ಯರಾತ್ರಿಯ ವೇಳೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ಚಾಣಕ್ಯ ಅಮಿತ್ ಶಾ ದೆಹಲಿಯಿಂದ ವಿಶೇಷ ವಿಮಾನ ಮೂಲಕ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಬೆಂಗಳೂರು ಪ್ರವಾಸದ ಕಾರ್ಯಕ್ರಮ :

  • ಮೇ 3ರಂದು ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿರುವ ಕೇಂದ್ರ ಸಚಿವ ಅಮಿತ್ ಶಾ ಬಸವ ಜಯಂತಿ ಪ್ರಯುಕ್ತ ಅಣ್ಣ ಬಸವಣ್ಣರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ.
  • ನೃಪತುಂಗ ವಿಶ್ವವಿದ್ಯಾಲಯದ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸುವ ಮೂಲಕ ವಿವಿಗೆ ಅಧಿಕೃತವಾಗಿ ಶಿಲಾನ್ಯಾಸ ನೆರವೇರಿಸಲಿದ್ದಾರೆ.
  • ಬಳ್ಳಾರಿಯ ವಿಧಿವಿಜ್ಞಾನ ಪ್ರಯೋಗಾಲಯವನ್ನು ವರ್ಚ್ಯುಯಲ್ ಆಗಿ ಉದ್ಘಾಟಿಸಲಿದ್ದಾರೆ.
  • ಇ ಬೀಟ್ ಅಪ್ಲಿಕೇಷನ್ ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ 12 ರ ನಂತರ ಸಾತನೂರು ಗ್ರಾಮಕ್ಕೆ ತೆರಳಿ ನ್ಯಾಟ್ ಗ್ರಿಡ್ ಕ್ಯಾಂಪಸ್

ಮಧ್ಯಾಹ್ನ 2.30ರ ನಂತರ ನಡೆಯಲಿರುವ ರಾಜ್ಯ ಬಿಜೆಪಿ ಪದಾಧಿಕಾರಿಗಳು, ಕೋರ್ ಸಮಿತಿ ಮತ್ತು ಮೋರ್ಚಾ ಅಧ್ಯಕ್ಷರ ಜೊತೆ ಅಮಿತ್ ಶಾ ಸಭೆ ನಡೆಸಲಿದ್ದಾರೆ. ವಿಶೇಷವೆಂದರೆ ಈ ಸಭೆಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ
ಆಗಮಿಸಲಿದ್ದಾರೆ.

  • ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಬಿಜೆಪಿಯ ಅಧಿಕೃತ ಕಾರ್ಯಕ್ರಮವೊಂದರಲ್ಲಿ ಈಶ್ವರಪ್ಪ ಕಾಣಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ನಾಯಕತ್ವ ಬದಲಾವಣೆ ಸುದ್ದಿ ಓಡಾಡುತ್ತಿರುವಾಗ ಅಮಿತ್ ಶಾರನ್ನು ಭೇಟಿ ಮಾಡುತ್ತಿದ್ದಾರೆ.
  • ಸಂಜೆ 5.30ರ ವೇಳೆಗೆ ಬೆಂಗಳೂರಿನಲ್ಲಿ ನಡೆದಿರುವ ಖೇಲೋ ಇಂಡಿಯಾ ವಿಶ್ವವಿದ್ಯಾಲಯಗಳ ಗೇಮ್ಸ್ 2021 ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಂಠೀರವ ಕ್ರೀಡಾಂಗಣಕ್ಕೆ ಅಮಿತ್ ಶಾ
    ಬರಲಿದ್ದಾರೆ.
  • ಸಚಿವರು ತಮ್ಮ ಕ್ಷೇತ್ರದಲ್ಲಿ ಜನ ಪರ ಕೆಲಸ, ಭ್ರಷ್ಟ ರಹಿತ ಆಡಳಿತ, ಪಕ್ಷದ ವರ್ಚಸ್ಸು ಹೆಚ್ಚಿಸುವ ಕಾರ್ಯಕ್ರಮ ಸೇರಿದಂತೆ ಹಲವು ಮಾನದಂಡ ಇಟ್ಟುಕೊಂಡು ಮಾಹಿತಿ ಸಂಗ್ರಹಿಸಲಿದ್ದಾರೆ.
  • ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 150 ಸ್ಥಾನಗಳಲ್ಲಿ ಜಯ ಸಾಧಿಸಬೇಕು.

40 ಮಂದಿ ಹೊಸಬರಿಗೆ ಟಿಕೆಟ್ ನೀಡಿ ಮುಂದಿನ ತಲೆಮಾರಿಗೆ ಬಿಜೆಪಿ ಪಕ್ಷವನ್ನು ಮುನ್ನೆಡೆಸುವ ಯುವಕರಿಗೆ ಆದ್ಯತೆ ನೀಡಬೇಕು ಎಂಬುದು ಹೈಕಮಾಂಡ್ ನಿಲುವಾಗಿದೆ. ಚುನಾವಣೆ ಮುಂದಿಟ್ಟುಕೊಂಡು ಜಾತಿವಾರು ಲೆಕ್ಕಾಚಾರದಂತೆ ರಾಜ್ಯಾಧ್ಯಕ್ಷರನ್ನು ನೇಮಿಸುವ ಸಾಧ್ಯತೆಯಿದೆ. ಅರವಿಂದ್ ಬೆಲ್ಲದ್, ಸಿಟಿ ರವಿ ಈ ಸ್ಥಾನದ ರೇಸ್ ನಲ್ಲಿದ್ದಾರೆ.

Share This Article
Leave a comment