ವಿಜಯಪುರದಲ್ಲಿ ಕೇಂದ್ರ ಸಚಿವ ಜೋಶಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ

Team Newsnap
1 Min Read
Union Minister Joshi helicopter landing mishap in Vijayapura ವಿಜಯಪುರದಲ್ಲಿ ಕೇಂದ್ರ ಸಚಿವ ಜೋಶಿ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ

ವಿಜಯಪುರ ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ.

ವಿಜಯಪುರದ ಸೈನಿಕ ಶಾಲಾ ಆವರಣದಲ್ಲಿ ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ನೆಲಕ್ಕುರುಳಿದೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಸಚಿವ ಪ್ರಹ್ಲಾದ್ ಜೋಶಿ ಹೆಲಿಕಾಪ್ಟರ್ ಮೂಲಕ ವಿಜಯಪುರಕ್ಕೆ ಆಗಮಿಸುತ್ತಿದ್ದರು.

ಶಾಲಾ ಆವರಣದಲ್ಲಿ ಜೋಶಿ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅವಘಡ ಸಂಭವಿಸಿದೆ.

ಹೆಲಿಕಾಪ್ಟರ್ ಚಕ್ರದ ಗಾಳಿಯ ರಭಸಕ್ಕೆ ಬ್ಯಾರಿಕೇಡ್ ನೆಲಕ್ಕುರುಳಿದೆ. ನೆಲಕ್ಕೆ ಬಿದ್ದ ಬ್ಯಾರಿಕೇಡ್​ಗಳನ್ನು ತಕ್ಷಣ ಪೊಲೀಸರು ಸರಿಪಡಿಸಿದ್ದಾರೆ. ಅದೃಷ್ಟವಶಾತ್ ಹೆಲಿಪ್ಯಾಡ್​​ನಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ.ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ’ ನಲ್ಲಿ ಮಳೆ ಅವಾಂತರ: ಸರಣಿ ಅಪಘಾತ

Share This Article
Leave a comment