ಸಿಎಂಗೆ ಕಪಾಳ ಮೋಕ್ಷ ಮಾಡುತ್ತಿದ್ದೆ ಎಂದ ಕೇಂದ್ರ ಸಚಿವ ರಾಣೆ ಪೋಲಿಸರ ವಶಕ್ಕೆ

Team Newsnap
1 Min Read

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ’ ಅನ್ನೋ ಹೇಳಿಕೆಗೆ ಸಂಬಂಧಿಸಿದಂತೆ ರತ್ನಗಿರಿಯಲ್ಲಿ ನಾಶಿಕ್ ಪೋಲಿಸರು ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಹೇಳಿಕೆ ಸಂಬಂಧ ನಾಶಿಕ್ ಪೊಲೀಸ್ ಆಯುಕ್ತ ದೀಪಕ್ ಪಾಂಡೆ ಅವರು ಕೇಂದ್ರ ಸಚಿವರ ವಿರುದ್ಧ ಬಂಧನದ ವಾರಂಟ್ ಹೊರಡಿಸಿದ್ದರು.

ವಾರೆಂಟ್ ಜಾರಿಯಾಗುತ್ತಿದಂತೆ ಮಂಗಳವಾರ ಬೆಳಗ್ಗೆ ನಾಸಿಕ್ ಪೊಲೀಸ್ ತಂಡ, ಕೇಂದ್ರ ಸಚಿವ ರಾಣೆ ಅವರನ್ನು ಬಂಧಿಸಲು ಅವರು ಪ್ರಸ್ತುತ ಜನ ಆಶೀರ್ವಾದ ಯಾತ್ರೆ ನಡೆಸುತ್ತಿರುವ ರತ್ನಗಿರಿ ಜಿಲ್ಲೆಗೆ ತೆರಳಿದ್ದರು.‌

ತಮ್ಮ ವಿರುದ್ಧ ಪೊಲೀಸರು ಎಫ್​ಐಆರ್​​ ಕೂಡ ದಾಖಲಿಸಿದ್ದಾರೆಂದು ಪ್ರಶ್ನಿಸಿ ಕೇಂದ್ರ ಸಚಿವರು ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.

ಇನ್ನು ರಾಣೆ ಅವರು ಸಿಎಂ ವಿರುದ್ಧದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಯಾವುದೇ ಅಪರಾಧ ಮಾಡಿಲ್ಲ ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ ಏನು ?

ಸೋಮವಾರ ರಾಯಗಡ ಜನಾರ್ಶೀವಾದ ಯಾತ್ರೆಯಲ್ಲಿ ಮಾತನಾಡಿದ ಸಚಿವ ನಾರಾಯಣ ರಾಣೆ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದು ಯಾವ ವರ್ಷ ಎಂಬುದನ್ನು ತಿಳಿಯದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ಕಪಾಳಕ್ಕೆ ಬಾರಿಸುತ್ತಿದ್ದೆ ಅಂತಾ ಹೇಳಿದ್ದರು.

ಆಗಸ್ಟ್ 15ರಂದು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದಾಗ ಸ್ವಾತಂತ್ರ್ಯ ಲಭಿಸಿದ ವರ್ಷವನ್ನು ಪಕ್ಕದವರಿಂದ ಕೇಳಿ ತಿಳಿದುಕೊಂಡಿದ್ದರು. ಇದೇ ವಿಚಾರಕ್ಕೆ ನಾರಾಯಣ ರಾಣೆ ಉದ್ದವ್ ಠಾಕ್ರೆ ವಿರುದ್ಧ ವಾಗ್ದಾಳಿ ನಡೆಸಿದ್ದರು.

Share This Article
Leave a comment