ಕೇಂದ್ರ ಗ್ರಾಹಕರ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಖಾತೆ ಸಚಿವ ರಾಮ್ ವಿಲಾಸ್ ಪಾಸ್ವಾನ್(74) ಗುರುವಾರ ನಿಧನರಾದರು. ಆ ಬಗ್ಗೆ ಪುತ್ರ ಚಿರಾಗ್ ಪಾಸ್ವಾನ್ ಟ್ವೀಟ್ ಮಾಡಿದ್ದಾರೆ.
ಕೇಂದ್ರ ಸಚಿವ, ಬಿಹಾರದ ಲೋಕ ಜನಶಕ್ತಿ ಪಕ್ಷದ ನಾಯಕ ರಾಮ್‌ವಿಲಾಸ್ ಪಾಸ್ವಾನ್ ಇತ್ತೀಚೆಗಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಎದೆ ನೋವಿನ ಕಾರಣ ಕೆಲವು ವಾರಗಳ ಹಿಂದೆ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
‘ಶನಿವಾರ (ಅ.3) ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಪುನಃ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಅವರು ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಅಗತ್ಯಬಿದ್ದರೆ ಕೆಲವು ವಾರಗಳ ನಂತರ ಮತ್ತೊಂದು ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು’ ಎಂದು ಪುತ್ರ ಚಿರಾಗ್ ಭಾನುವಾರ ಹೇಳಿದ್ದರು.
ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು.
More Stories
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು