ರಿಹಾನಾಗೆ ರೈತರ ಶ್ರಮದ ಬಗ್ಗೆ ಏನು ಗೊತ್ತು? ರಿಹಾನಾ ಭತ್ತದ ಗದ್ದೆ ನೋಡಿದ್ದಾರಾ? ಎಂದು ಕೇಂದ್ರ ಸಚಿವ ಸದಾನಂದಗೌಡ ಪಾಪ್ ಗಾಯಕಿ ರಿಹಾನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಶನಿವಾರ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪಾಪ್ ಗಾಯಕಿ ರಿಹಾನ ಅವರಿಗೆ ರೈತರ ಕಷ್ಟದ ಬಗ್ಗೆ ಏನು ಗೊತ್ತಿದೆ. ಅವರಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ರಿಹಾನಾ ಭತ್ತದ ಗದ್ದೆ ಮುಂದೆ ನಿಂತು ಫೋಟೋ ತೆಗೆಸಿಕೊಂಡು ಹೋಗಿರಬಹುದು ಅಷ್ಟೇ. ಆದರೆ, ರೈತರ ಶ್ರಮ ಬಗ್ಗೆ ತಿಳಿದಿಲ್ಲ ಎಂದು ಕಿಡಿಕಾರಿದರು.
ವಿದೇಶಿ ಕೈಗೊಂಬೆಯಾಗಿ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ರೈತರು ಹೇಗೆ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಾರೆ ಎಂಬ ವಿಚಾರವನ್ನು ಅವರು ತಿಳಿದುಕೊಂಡಿದ್ದಾರ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರೂ ರೈತನಿಗೆ ಇನ್ನು ಸ್ವಾತಂತ್ರ್ಯ ದೊರಕಿಲ್ಲ. ರೈತರು ತಮಗೆ ಬೇಕಾದವರಿಗೆ ಬೆಳೆ ಮಾರಾಟ ಮಾಡಲು ಸ್ವಾತಂತ್ರ್ಯ ಇಲ್ಲವಾಗಿದೆ. ಹಾಗಾಗಿ ರೈತನಿಗೆ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಲು ಸ್ವಾತಂತ್ರ್ಯ ನೀಡುತ್ತಿದ್ದೇವೆ. ತನ್ನ ಬೆಳೆಗೆ ಯಾರಾದರೂ ಹೆಚ್ಚು ಬೆಲೆ ಕೊಡುವವರಿಗೆ ಮಾರಾಟ ಮಾಡಲಿ ಎಂದರು.
ರೈತರು ಬಂಡವಾಳ ಶಾಹಿಗಳ ಕೈಗೊಂಬೆಯಾಗುತ್ತಾರೆ ಎನ್ನುವುದು ಸುಳ್ಳು. ರೈತರು ಎಪಿಎಂಸಿ ಕೈಗೊಂಬೆಯಾಗಿ ಇರುವುದು ಬೇಡ. ಸ್ವತಂತ್ರವಾಗಿ ಬೆಳೆ ಮಾರಾಟ ಮಾಡಲು ಅವಕಾಶ ಕೊಟ್ಟಿದ್ದೇವೆ. ಆದರೆ, ಪಟ್ಟಭದ್ರ ಹಿತಾಸಕ್ತಿಯಿಂದ ರೈತರ ಪ್ರತಿಭಟನೆ ನಡೆಯುತ್ತಿದೆ ಎಂದು ಆರೋಪಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು