November 15, 2024

Newsnap Kannada

The World at your finger tips!

k r pete yogi

ಕೆ ಆರ್ ಪೇಟೆಯ ತ್ರಿವೇಣಿ ಸಂಗಮದ ಮಹಾ ಕುಂಭಮೇಳಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ

Spread the love

ಕೆ ಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಗಮಿಸಲಿದ್ದಾರೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಗುರುವಾರ ಲಖನೌನಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಕೆಆರ್ ಪೇಟೆಯ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಮಹಾಕುಂಭಮೇಳಕ್ಕೆ ಆಹ್ವಾನ ನೀಡಿದರು.

ಅಕ್ಟೋಬರ್ 13 ರಿಂದ 16 ರ ವರೆಗೂ ಕೆಆರ್ ಪೇಟೆಯ ಲಕ್ಷ್ಮಣತೀರ್ಥ-ಹೇಮಾವತಿ-ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಈ ಮಹಾಕುಂಭ ಮೇಳದಲ್ಲಿ ಅಕ್ಟೋಬರ್ 16 ರಂದು ಪಾಲ್ಗೊಳ್ಳುವುದಾಗಿ ಯೋಗಿ ಆದಿತ್ಯನಾಥ್ ಅವರು ತಿಳಿಸಿದರು.

ಮಾತುಕತೆ-ವಿಶೇಷ ಆತಿಥ್ಯ

ತಮ್ಮನ್ನು ಭೇಟಿ ಮಾಡಿದ ಸಚಿವ ಡಾ.ನಾರಾಯಣಗೌಡ ಹಾಗೂ ನಿಯೋಗದ ಜೊತೆ ಮುಕ್ಕಾಲು ಗಂಟೆಗೂ ಅಧಿಕ ಕಾಲ ಯೋಗಿ ಆದಿತ್ಯನಾಥ್ ಅವರು ಮಾತುಕತೆ ನಡೆಸಿ, ವಿಶೇಷ ಆತಿಥ್ಯ ನೀಡಿದರು.

ಕರ್ನಾಟಕ ಹಾಗೂ ಉತ್ತರ ಪ್ರದೇಶಕ್ಕೂ ಗೋರಖನಾಥೇಶ್ವರನ ಸಂಬಂಧದ ಬಗ್ಗೆ ಯೋಗಿಜೀ ಮೆಲುಕು ಹಾಕಿದರು. ಪರಶುರಾಮ ಕಥೆ, ಕಾಲಬೈರವೇಶ್ವರನ ಕಥೆ, ಧರ್ಮಸ್ಥಳ ಮತ್ತು ಆದಿಚುಂಚನಗಿರಿಯ ಇತಿಹಾಸ ಹಾಗೂ ನಾಥ ಪರಂಪರೆಯ ಹಾಗೂ ಕರ್ನಾಟಕ ಸರ್ಕಾರ ಪ್ರಸ್ತುತ ಕೈಗೊಂಡಿರುವ ಅಭಿವೃದ್ದಿ ಕಾರ್ಯಗಳು ಸೇರಿದಂತೆ ಹಲವು ವಿಚಾರಗಳ ಕುರಿತು ಸುದೀರ್ಘವಾಗಿ ಮಾತುಕತೆ ನಡೆಸಿದರು. ನಾನು ಭ್ರಷ್ಟಾಚಾರಿ ಅಲ್ಲ: ಮೇಲುಕೋಟೆ ದೇವರ ಎದುರು ಆಣೆ ಮಾಡಲು ಸಿದ್ದ – ಸಂಸದೆ ಸುಮಲತಾ ಸವಾಲು

ಇದೇ ಸಂದರ್ಭದಲ್ಲಿ ಕುವೆಂಪು ಅವರ ರಾಮಯಣ ದರ್ಶನಂ ಹಾಗೂ ಎಸ್ ಎಲ್ ಭೈರಪ್ಪನವರ ಪರ್ವ ಪುಸ್ತಕವನ್ನು ಯೋಗಿ ಆದಿತ್ಯನಾಥ್ ಅವರಿಗೆ ಸಚಿವರು ನೀಡಿದರು. ಕೆಪಿಎಸ್‌ಸಿ ಸದಸ್ಯ ಪ್ರಭುದೇವ್, ಸಚಿವರ ಆಪ್ತ ಕಾರ್ಯದರ್ಶಿ ಪ್ರಭಾಕರ್ ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!