May 29, 2022

Newsnap Kannada

The World at your finger tips!

election 1

ಉತ್ತರ ಪ್ರದೇಶದಲ್ಲಿ ಇಂದು ಮೊದಲ ಹಂತದ ಮತದಾನ ಆರಂಭ

Spread the love

ತೀವ್ರ ಕುತೂಹಲ ಮೂಡಿಸಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇಂದಿನಿಂದ ಮೊದಲ ಹಂತದ ಮತದಾನ ಬಿರುಸಿನಿಂದ ಸಾಗಿದೆ.

ಇಂದು ಮೊದಲ ಹಂತದಲ್ಲಿ 11 ಜಿಲ್ಲೆಯ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಬೆಳಗ್ಗೆ ಆರು ಗಂಟೆಯಿಂದ ಸಂಜೆ ಆರು ಗಂಟೆವರೆಗೂ ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಮತದಾನ ಪ್ರಕ್ರಿಯೆಗಳು ಆರಂಭವಾಗಿವೆ.

ಮೊದಲ ಹಂತದ ಈ ಚುನಾವಣೆಯು ಪಶ್ಚಿಮ ಉತ್ತರ ಪ್ರದೇಶದಲ್ಲಿ ನಡೆಯಲಿದೆ. ಇದು ಉಳಿದ ಹಂತದ ಮತದಾನದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.

ಮೂರು ಕೃಷಿ ಕಾನೂನುಗಳು ಮತ್ತು ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ಈ ಪ್ರದೇಶದಲ್ಲಿ ಬಿಜೆಪಿ ಕೊಂಚ ಕಷ್ಟ ಎದುರಿಸಲಿದೆ ಎಸ್‍ಪಿ ಮತ್ತು ಆರ್‍ಎಲ್‍ಡಿಗೆ ಪೂರಕವಾಗಿ ವಾತಾವರಣ ನಿರ್ಮಾಣವಾಗಿದೆ. ಜಾಟ್ ಮತ್ತು ಮುಸ್ಲಿಂ ಮತಗಳು ನಿರ್ಣಾಯಕ ವಾಗಿದ್ದು ಬಿಎಸ್‍ಪಿ ಮುಸ್ಲಿಂ ಮತಗಳನ್ನು ಕೇಂದ್ರಿಕರಿಸಿದೆ.

ಯಾರ ಅದೃಷ್ಟ ಪರೀಕ್ಷೆಯಲ್ಲಿ ?

ಮೊದಲ ಹಂತದಲ್ಲಿ ಸಚಿವರಾದ ಶ್ರೀಕಾಂತ್ ಶರ್ಮಾ, ಸುರೇಶ್ ರಾಣಾ, ಸಂದೀಪ್ ಸಿಂಗ್, ಕಪಿಲ್ ದೇವ್ ಅಗರ್ವಾಲ್, ಅತುಲ್ ಗಾರ್ಗ್ ಮತ್ತು ಚೌಧುರಿ ಲಕ್ಷ್ಮಿ ನಾರಾಯಣ್ ಸೇರಿದಂತೆ ಹಲವು ನಾಯಕರ ಭವಿಷ್ಯ ನಿರ್ಧಾರವಾಗಲಿದೆ.

error: Content is protected !!