ಉರಿಗೌಡ, ದೊಡ್ಡ ನಂಜೇಗೌಡ ಸಿನಿಮಾ ಮಾಡಲ್ಲ : ಸಚಿವ ಮುನಿರತ್ನ

Team Newsnap
1 Min Read

ಉರಿಗೌಡ, ದೊಡ್ಡ ನಂಜೇಗೌಡ ಸಿನಿಮಾ ನಿರ್ಮಾಣದ ಕುರಿತಂತೆ ಮುನಿರತ್ನ ಯೂಟರ್ನ್ ಹೊಡೆದಿದ್ದು, ನಿರ್ಮಲಾನಂದ ಸ್ವಾಮೀಜಿಗಳ ಭೇಟಿ ಬಳಿಕ ಮಾತನಾಡಿದ ಮುನಿರತ್ನ ಅವರು, ಉರಿಗೌಡ, ದೊಡ್ಡ ನಂಜೇಗೌಡ ಕುರಿತ ಸಿನಿಮಾ ನಿರ್ಮಾಣ ಮಾಡಲ್ಲ ಎಂದು ಹೇಳುವ ಮೂಲಕ ವಿವಾದಿತ ಚಲನಚಿತ್ರ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಬಿಜೆಪಿಯವನು ಅಂತಾ ನಾನು ಈ ಸಿನಿಮಾ ಮಾಡಲು ಹೋಗಲ್ಲ. ಶ್ರೀಗಳು ನೈಜತೆ ಇದ್ದರೆ ಅದರ ಬಗ್ಗೆ ಯೋಚನೆ ಮಾಡಿ ಎಂದರು. ಗೊಂದಲ ಇರುವಾಗ ಯಾವುದು ಸೂಕ್ತ ಎಂದು ಕೇಳಿದರು. ಶ್ರೀಗಳ ಮಾತಿನಂತೆ ನಾನು ಸಿನಿಮಾ ಮಾಡಲ್ಲ ಎಂದು ಹೇಳಿದ್ದಾರೆ.

ಉರಿಗೌಡ, ನಂಜೇಗೌಡ ಸಿನಿಮಾ ನಿರ್ಮಾಣ ವಿಚಾರ ರಾಜಕೀಯ ಗದ್ದಲಕ್ಕೆ ಕಾರಣವಾದ ಬೆನ್ನಲ್ಲೆ ನಿರ್ಮಾಪಕ, ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ಉರಿಗೌಡ-ನಂಜೇಗೌಡ ಪಾತ್ರಗಳನ್ನು ಪ್ರಧಾನವಾಗಿರಿಸಿ ಅದೇ ಹೆಸರಲ್ಲಿ ಸಿನಿಮಾ ನಿರ್ಮಾಣಕ್ಕೆ ಮುಂದಾಗಿದ್ದರು.

ವೃಷಭ ಪ್ರೊಡಕ್ಷನ್‌ನಲ್ಲಿ ಮೇ 14ರಂದು ಚಿತ್ರೀಕರಣದ ಮುಹೂರ್ತ ಮಾಡಬೇಕು ಅಂದುಕೊಂಡಿದ್ದೆ. ಬಹಳ ದೊಡ್ಡ ಸಿನಿಮಾ ಮಾಡಬೇಕು ಅಂದುಕೊಂಡಿದ್ದೆ. ಮೈಸೂರು ಸಂಸ್ಥಾನ ಹಾಗೂ ಟಿಪ್ಪು ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡ ಚರ್ಚೆಯಾಗಿತ್ತು. ಕುಮಾರಸ್ವಾಮಿ ಅವರು ಮುನಿರತ್ನನಿಗೆ ಅಶ್ವಥ್‌ ನಾರಾಯಣ್ ಸಿನಿಮಾ ಮಾಡೋಕೆ ಹೇಳಿರಬೇಕು ಎಂದಿದ್ದರು. ಅಲ್ಲಿಯವರೆಗೆ ನನಗೆ ಸಿನಿಮಾ ಮಾಡುವ ಆಲೋಚನೆ ಇರಲಿಲ್ಲ ಎಂದು ತಿಳಿಸಿದ್ದಾರೆ.

ಉರಿಗೌಡ-ನಂಜೇಗೌಡ ವಿಚಾರದಲ್ಲಿ ಒಂದಷ್ಟು ದಾಖಲೆ ಸಿಗುತ್ತಿವೆ, ಒಂದಷ್ಟು ಸಿಗುತ್ತಿಲ್ಲ. ನನಗ ಚಿತ್ರ ಮಾಡಬೇಕು ಅನ್ನಿಸಿತು. ಸ್ವಾಮೀಜಿ ಅವರ ಜೊತೆ ಚರ್ಚೆ ಮಾಡಿದೆ. ಆಗ ನನಗೆ ಅನ್ನಿಸಿತು, ಯಾರಿಗೂ ಮನಸ್ಸು ನೋಯಿಸಿ ಸಿನಿಮಾ ಮಾಡಬಾರದು. ಸಿನಿಮಾ ಮಾಡಲು ಕಥೆಗಳು ತುಂಬಾ ಸಿಗುತ್ತದೆ. ಸ್ವಾಮೀಜಿ ಅವರಿಗೆ ಹೇಳಿದ್ದೇನೆ. ಯಾರ ಮನಸ್ಸು ನೋಯಿಸುವ ಉದ್ದೇಶ ನನ್ನದಲ್ಲ. ನಾನು ಈ‌ ಸಿನಿಮಾವನ್ನು ಇಲ್ಲಿಗೆ ಕೈ ಬಿಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

Share This Article
Leave a comment