ಯಮುನಾ ಹೆದ್ದಾರಿಯಲ್ಲಿ ತೈಲ ಟ್ಯಾಂಕರ್ ಮತ್ತು ಕಾರಿನ ನಡುವೆ ಮಂಗಳವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟ ಘಟನೆ ಉತ್ತರ ಪ್ರದೇಶದ ನೌಝೀಲ್ ಪೊಲೀಸ್ ಠಾಣೆ ಬಳಿಯೇ ಜರುಗಿದೆ.
ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು ಏಳು ಮತ್ತು ಸಾವನ್ನಪ್ಪಿದ್ದಾರೆ ಎಂದು ಮಧುರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಗ್ರೋವರ್ ತಿಳಿಸಿದ್ದಾರೆ.
ಆಗ್ರಾದ ಕಡೆಗೆ ಹೊರಟಿದ್ದ ತೈಲ ಟ್ಯಾಂಕರ್ ಹೆದ್ದಾರಿಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಡಿವೈಡರ್ ಮತ್ತು ಟ್ಯಾಂಕರ್ ಮಧ್ಯೆ ಕಾರು ಸಿಲುಕಿದ ಹಿನ್ನೆಲೆ ಕಾರಿನಲ್ಲಿದ್ದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.
ಉತ್ತರ ಪ್ರದೇಶ ಯಮುನಾ ಹೆದ್ದಾರಿ ಅಪಘಾತದಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿ ಬರಬೇಕಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್