ಮುಂದಿನ ವಷ೯ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ಏಕಾಂಗಿಯಾಗಿ ಸ್ಪರ್ಧೆ ಮಾಡುತ್ತದೆ ಎಂದು ಐಎಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ
ಬುಲಂದರ್ ಶಹರ್
ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಪ್ರಿಯಾಂಕ ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುಣಾವಣೆಯಲ್ಲಿ ಇತರ ರಾಜಕೀಯ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿಯ ಯಾವುದೇ ಸಾಧ್ಯತೆಗಳು ಇಲ್ಲ ಎಂದಿದ್ದಾರೆ
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಮಾತ್ರ ನಾವು ನಾಮನಿರ್ದೇಶನ ಮಾಡುತ್ತೇವೆ. ಒಂದು ವೇಳೆ ಕಾಂಗ್ರೆಸ್ ಗೆಲುವು ಸಾಧಿಸಿದರೆ ಅದು ತನ್ನ ಸ್ವಂತ ಸಾಮರ್ಥ್ಯದಿಂದ ಗೆಲುವು ಸಾಧಿಸಲಿದೆ ಎಂದು ಹೇಳಿದ್ದಾರೆ.
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ ಶೇಕಡಾ 40 ರಷ್ಟು ಟಿಕೆಟ್ ನೀಡುವುದಾಗಿ ಕಾಂಗ್ರೆಸ್ ಇತ್ತೀಚೆಗೆ ಭರವಸೆ ನೀಡಿತ್ತು. ಮಹಿಳೆಯರನ್ನು ಅಧಿಕಾರದಲ್ಲಿ ಪೂರ್ಣ ಪ್ರಮಾಣದ ಪಾಲುದಾರರನ್ನಾಗಿ ಮಾಡುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.
ಈ ಹಿಂದಿನ ಅನುಭವದಿಂದ ಪಾಠ ಕಲಿತಿರುವುದರಿಂದ ಯಾವುದೇ ಪ್ರಮುಖ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಈಗಾಗಲೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸ್ಷಷ್ಟವಾಗಿ ಹೇಳಿದ್ದಾರೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ