ನಟಿ ಪ್ರಣೀತ ಪ್ರವಾಹದಿಂದ ತತ್ತರಿಸಿ ಹೋಗಿರುವ ಉತ್ತರ ಕರ್ನಾಟಕದ ಜನರ ನೆರವಿಗೆ ಧಾವಿಸಿದ್ದಾರೆ.
ನೆರೆ ಸಂತ್ರಸ್ತರಿಗಾಗಿ ಅಗತ್ಯ ವಸ್ತುಗಳನ್ನು ನಟಿ ಪ್ರಣೀತ ಪೂರೈಸಿದ್ದಾರೆ. ಸುಮಾರು ಒಂದು ಲಕ್ಷ ಮೌಲ್ಯದ ಅಗತ್ಯ ವಸ್ತುಗಳನ್ನು ಕಷ್ಟದಲ್ಲಿರುವ ಜನರಿಗೆ ನೀಡಿದ್ದಾರೆ. ಪ್ರಣೀತ ಫೌಂಡೇಶನ್ ವತಿಯಿಂದ ಈ ಕೆಲಸ ಮಾಡಲಾಗಿದೆ. ಈ ಬಗ್ಗೆ ಪ್ರಣೀತ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಅಕ್ಕಿ, ಬೇಳೆ ಸೇರಿದಂತೆ ದಿನನಿತ್ಯದ ಅಗತ್ಯ ವಸ್ತುಗಳನ್ನು ಪ್ರವಾಹದಿಂದ ಪರದಾಡುತ್ತಿರುವ ಜನರಿಗೆ ಕಳುಹಿಸಿದ್ದಾರೆ. ಪ್ರಣೀತ ಫೌಂಡೇಶನ್ ಆಹಾರ ವಸ್ತುಗಳನ್ನು ಸಾಗಿಸುತ್ತಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಫೋಟೋ ಜೊತೆಗೆ ಪ್ರಣೀತ, “ನಮ್ಮಲ್ಲಿ ಅನೇಕರು ದಸರಾ ಆಚರಿಸಿಸುತ್ತಿದ್ದಾರೆ, ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ನ ಅನೇಕ ಕುಟುಂಬಗಳು ಪ್ರವಾಹದಿಂದ ಬಳಲುತ್ತಿದ್ದಾರೆ. 1ಲಕ್ಷ ಸಣ್ಣ ಕೊಡುಗೆ ನಮ್ಮದು. ನಾವು ಪ್ರವಾಹ ಪೀಡಿತ ಪ್ರದೇಶಗಳಿಗೆ ಕೆಲವು ಮೂಲಭೂತ ಅಗತ್ಯಗಳನ್ನು ಕಳುಹಿಸುವಲ್ಲಿ ಯಶಸ್ವಿಯಾಗಿದ್ದೇವೆ.” ಎಂದು ಬರೆದುಕೊಂಡಿದ್ದಾರೆ.
ಉತ್ತರ ಕರ್ನಾಟಕ ಮತ್ತೆ ಪ್ರವಾಹದಿಂದ ತತ್ತರಿಸಿಹೋಗಿದೆ. ಉತ್ತರ ಕರ್ನಾಟಕ ಮತ್ತು ತೆಲಂಗಾಣದ ಅನೇಕ ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಬೆಳಗಾವಿ, ವಿಜಯಪುರ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಸತತ ಮಳೆ ಹಾಗೂ ಪ್ರವಾಹದಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಅನೇಕ ಕುಟುಂಬಗಳು ನಿರಾಶ್ರಿತರಾಗಿದ್ದು, ಜನರು ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ.
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ