ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ ದೇವೇಗೌಡರ ನೇತ್ರತ್ವದಲ್ಲಿ ಬೆಳಗಾವಿ, ಚಿಕ್ಕೋಡಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಹುಬ್ಬಳ್ಳಿ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ
ಜಿಲ್ಲೆಗಳ ತಾಲೂಕಿನ ಅಧ್ಯಕ್ಷರು, ಜಿಲ್ಲಾಧ್ಯಕ್ಷರು ಮತ್ತು ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ ಕುಮಾರಸ್ವಾಮಿಯವರು ಪಾಲ್ಗೊಂಡಿದ್ದರು.
ಕರ್ನಾಟಕ ರಾಜ್ಯದ ಬಹುತೇಕ ಜಿಲ್ಲೆಗಳು ಕಳೆದ ಎರಡು ವರ್ಷಗಳಿಂದ ನೆರೆ ಹಾವಳಿಯಿಂದ ತತ್ತರಿಸಿವೆ. ಸರ್ಕಾರವು ನೊಂದವರಿಗೆ ಅಗತ್ಯ ನೆರವು ಹಾಗೂ ಸೌಲಭ್ಯ ಕಲ್ಪಿಸುವುದರಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಕೊರೊನಾ ಸಂದರ್ಭದಲ್ಲಿ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ಯನ್ನು ಅರಿಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ವೀಡಿಯೋ ಸಂವಾದವನ್ನು ಏರ್ಪಡಿಸಲಾಗಿತ್ತು.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು
ವಿರಾಟ್ ಕೊಹ್ಲಿಗೆ ಬಿಬಿಎಂಪಿ ನೋಟಿಸ್