December 3, 2024

Newsnap Kannada

The World at your finger tips!

uttarkhand 2

ಕುಂಭದ್ರೋಣ ಮಳೆಯ ಆರ್ಭಟಕ್ಕೆ ಉತ್ತರಾಖಂಡ, ಹಿಮಾಚಲ ಪ್ರದೇಶ ತತ್ತರ

Spread the love

ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಅನಾಹುತಗಳು ಸಂಭವಿಸುತ್ತಲೇ ಇವೆ. ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅವಾಂತರಗಳಿಂದ ಈವರೆಗೆ 66 ಮಂದಿ ಸಾವನ್ನಪ್ಪಿದ್ದರೆ, ಉತ್ತರಾಖಂಡದಲ್ಲಿ 6 ಮಂದಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಭಾರತೀಯ ಹವಾಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಡೆಹ್ರಾಡೂನ್‌, ಪುರಿ, ತೆಹ್ರಿ, ನೈನಿತಾಲ್‌, ಚಂಪಾವತ್‌ ಮತ್ತು ಉಧಮ್‌ ಸಿಂಗ್‌ ನಗರಗಳು ಸೇರಿದಂತೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವು ಪ್ರದೇಶಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಜೋಶಿಮಠ ಬಳಿ ಕಟ್ಟಡ ಕುಸಿತ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

uttarkhand

ಉತ್ತರಾಖಂಡದಲ್ಲಿ ಮಳೆ ರೌದ್ರನರ್ತನಕ್ಕೆ ಚಮೋಲಿ ಜಿಲ್ಲೆಯಲ್ಲಿ ಭೂಕುಸಿತ ಪೀಡಿತ ಪ್ರದೇಶವಾದ ಜೋಶಿಮಠ ಸಮೀಪದ ಹೆಲಾಂಗ್‌ನಲ್ಲಿ ಮಂಗಳವಾರ ತಡರಾತ್ರಿ ಕಟ್ಟಡವೊಂದು ಕುಸಿದುಬಿದ್ದಿದ್ದು, ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆಗಳು ವ್ಯಕ್ತವಾಗಿವೆ. ಈವರೆಗೂ ಮೂವರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ನ್ಯಾಯಾಧೀಶನೆ ಪತ್ನಿಯ ಮೇಲೆ ಗುಂಡು ಹಾರಿಸಿ ಹತ್ಯೆ

ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಮಂಡಿ ಪ್ರದೇಶದಲ್ಲಿ ಅತಿ ಹೆಚ್ಚು ಜನರು ಮೃತಪಟ್ಟಿದ್ದಾರೆ. ಭೂಕುಸಿತದಿಂದ ಹೆದ್ದಾರಿಗಳಲ್ಲಿ ಸಿಲುಕಿರುವ ಪ್ರಯಾಣಿಕರನ್ನು ರಕ್ಷಿಸುವ ಕಾರ್ಯದಲ್ಲಿ ವಿಪತ್ತು ನಿರ್ವಹಣಾ ತಂಡ ತೊಡಗಿದೆ. ಚಂಡೀಗಢ–ಶಿಮ್ಲಾ ನಡುವಿನ ರಾಷ್ಟ್ರೀಯ ಹೆದ್ದಾರಿಗಳು ಸಂಚಾರಕ್ಕೆ ಮುಕ್ತವಾಗಿದ್ದು, ರಾಜ್ಯ ಹೆದ್ದಾರಿಗಳ ತೆರವಿಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!