- 13 ಜಿಲ್ಲಾಡಳಿತಗಳೊಂದಿಗೆ ಸಭೆ, ಕೋವಿಡ್ ನಿಯಂತ್ರಣಕ್ಕೆ ಸೂಚನೆ
ಕೋವಿಡ್ ಸೋಂಕು ತಡೆಗಟ್ಟಲು ಹಾಗೂ ಹೆಚ್ಚಿನವರಿಗೆ ಲಸಿಕೆ ನೀಡಲು ಉದ್ಯೋಗಸ್ಥರಿರುವಲ್ಲಿಗೇ ಹೋಗಿ ಲಸಿಕೆ ನೀಡಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇದಕ್ಕೆ ರಾಜ್ಯದಲ್ಲೂ ವ್ಯವಸ್ಥೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಕೋವಿಡ್ ನಿಯಂತ್ರಣ ಸಂಬಂಧ ಬೀದರ್, ಬೆಳಗಾವಿ, ವಿಜಯಪುರ, ಕಲಬುರ್ಗಿ, ತುಮಕೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು ಹಾಗೂ ಚಿತ್ರದುರ್ಗ ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ಸಚಿವರು ವೀಡಿಯೋ ಸಭೆ ನಡೆಸಿದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರ ಉದ್ಯೋಗಸ್ಥರಿಗೆ, ಅರ್ಹರಿಗೆ ಅದೇ ಸ್ಥಳಗಳಲ್ಲಿ ಹೋಗಿ ಲಸಿಕೆ ನೀಡುವ ಅವಕಾಶ ಕೊಟ್ಟಿದೆ. ಈ ಕುರಿತು ದೊಡ್ಡ ಉದ್ಯಮಗಳು, ಐಟಿ ಉದ್ಯಮಗಳು ಮನವಿ ಮಾಡಿದ್ದವು. ಅದಕ್ಕೆ ಕೇಂದ್ರದಿಂದ ಮಂಜೂರಾತಿ ಸಿಕ್ಕಿದೆ. ಏಪ್ರಿಲ್ 11ರಿಂದ ಅವರಿರುವ ಸ್ಥಳದಲ್ಲೇ ಲಸಿಕೆ ನೀಡುವ ವ್ಯವಸ್ಥೆಯಾಗಲಿದೆ. ಇದರಿಂದಾಗಿ ಲಸಿಕೆ ಪಡೆಯುವವರ ಸಂಖ್ಯೆ ಹೆಚ್ಚಲಿದೆ. ಈವರೆಗೆ 50 ಲಕ್ಷ ಡೋಸ್ ತಲುಪಲಾಗಿದೆ. ಆದಷ್ಟು ಶೀಘ್ರ ಇನ್ನಷ್ಟು 50 ಲಕ್ಷವಾಗಿ, ಒಂದು ಕೋಟಿ ತಲುಪಲಿದೆ ಎಂದರು.
ಕಳೆದೆರಡು ವಾರ ಗಮನಿಸಿದಾಗ ಕೆಲ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಾಗುತ್ತಾ ಹೋಗಿದೆ. ಕೆಲವು ಕಡೆ ಕೋವಿಡ್ ಪರೀಕ್ಷೆ ಕಡಿಮೆಯಾಗಿದೆ. ಸಾರಿ ಹಾಗೂ ಐಎಲ್ ಐ ಪ್ರಕರಣ ಪತ್ತೆ ಕಡಿಮೆ ಹಾಗೂ ಲಸಿಕೆ ಮೊದಲಾದ ವಿಷಯ ಕುರಿತು ಚರ್ಚಿಸಲಾಗಿದೆ. ಕೇಂದ್ರ ಆರೋಗ್ಯ ಸಚಿವರು ನೀಡಿದ ಮಾರ್ಗದರ್ಶನವನ್ನು ಈ ಜಿಲ್ಲೆಗಳಿಗೆ ತಿಳಿಸಲಾಗಿದೆ. ಎಲ್ಲರೂ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜನಸಾಮಾನ್ಯರು ಸ್ವಯಂ ನಿಯಮ ಹಾಕಿಕೊಳ್ಳಬೇಕು ಎಂದರು.
ಜನರು ನಡವಳಿಕೆಗಳಲ್ಲಿ ಬದಲಾವಣೆ ಮಾಡಿಕೊಂಡು ಸರ್ಕಾರಕ್ಕೆ ಸಹಕಾರ ನೀಡಬೇಕು. ಎರಡನೇ ಅಲೆ ನಿರೀಕ್ಷೆಗೆ ಮೀರಿ ಹರಡುತ್ತಿದೆ. ಸೋಂಕು ಹೆಚ್ಚಾದರೆ ಹಾಸಿಗೆ ಲಭ್ಯತೆ ಕಷ್ಟವಾಗುತ್ತದೆ. ಕಳೆದೊಂದು ವರ್ಷದಿಂದ ಎಲ್ಲ ಸಿದ್ಧತೆ ಮಾಡಿಕೊಂಡಿರುವುದರಿಂದ ಅಂತಹ ಸಮಸ್ಯೆ ಇಲ್ಲ. ಆದರೆ ಇದೇ ರೀತಿ 6%, 9% ಪಾಸಿಟಿವಿಟಿ ದರ ಬಂದರೆ ಅಥವಾ 20%, 25% ಬಂದರೆ ಎಷ್ಟು ಜನ ಐಸಿಯುಗೆ ಹೋಗಬೇಕಾಗುತ್ತದೆ ಎಂದು ಯೋಚಿಸಬೇಕಾಗುತ್ತದೆ. ಎಲ್ಲ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲು ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ 5 ಸಾವಿರ ಹತ್ತಿರಕ್ಕೆ ಪ್ರಕರಣ ಸಂಖ್ಯೆ ಬಂದಿದೆ. ಪಾಸಿಟಿವಿಟಿ ದರ ಶೇ.5.56 ಇದೆ. ಇಡೀ ರಾಜ್ಯದಲ್ಲಿ 35 ಒಟ್ಟು ಸಾವಾಗಿದ್ದರೆ, 25 ಬೆಂಗಳೂರಿನಲ್ಲೇ ಆಗಿದೆ. ನಾಳೆ ಬಿಬಿಎಂಪಿ, ಬೆಂಗಳೂರು ನಗರ, ಗ್ರಾಮಾಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಪ್ರಧಾನಮಂತ್ರಿಗಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಲಿರುವ ಸಭೆಯಲ್ಲಿ ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಕೂಡ ಪಾಲ್ಗೊಂಡು ಚರ್ಚಿಸಲಿದ್ದಾರೆ ಎಂದರು.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ