ವೈರಮುಡಿ ಬ್ರಹ್ಮೋತ್ಸವ: ಪೂರ್ವಭಾವಿ ಸಭೆ- ಕುಡಿಯುವ ನೀರು, ಮೂಲ ಸೌಲಭ್ಯಕ್ಕೆ ಆದ್ಯತೆ ನೀಡಿ – ಪುಟ್ಟರಾಜು

Team Newsnap
1 Min Read

ವಿಶ್ವ ವಿಖ್ಯಾತಿ ಮೇಲುಕೋಟೆ ವೈರಮುಡಿಯೂ ಮಾ.19 ರಿಂದ ಆರಂಭವಾಗಿ ಮಾರ್ಚ್ 24ರಂದು ವೈರಮುಡಿ ಕಿರೀಟಧಾರಣೆ, ಮಾ.31ರಂದು ವೈರಮುಡಿ ಬ್ರಹ್ಮೋತ್ಸವ ಜರುಗಲಿದೆ.

ಮೇಲುಕೋಟೆ ಪ್ರವಾಸಿ ಮಂದಿರದಲ್ಲಿ ಗುರುವಾರ ಶ್ರೀವೈರಮುಡಿ ಬ್ರಹ್ಮೋತ್ಸವ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ
ಮೇಲುಕೋಟೆ ಶಾಸಕ ಸಿ.ಎಸ್ ಪುಟ್ಟರಾಜು, ಉತ್ಸವದಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು. ಆದ್ದರಿಂದ ಕನಿಷ್ಟ ಮೂರರಿಂದ ನಾಲ್ಕು ಕಡೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಯೋಗನರಸಿಂಹ ಸ್ವಾಮಿ ದೇವಸ್ಥಾನದ ಬೆಟ್ಟದ ಕೆಳೆಗೆ ಸೇರಿದಂತೆ ಐದು ಕಡೆ ಶೌಚಾಲಯ ಗೃಹಗಳನ್ನು ನಿರ್ಮಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬೆಟ್ಟಕ್ಕೆ ಮೇಲಿನ ಯೋಗನರಸಿಂಹ ದೇವಸ್ಥಾನ, ಚಲುವನಾರಾಯಣಸ್ವಾಮಿ ದೇವಾಸ್ಥಾನ ಸೇರಿದಂತೆ ಗ್ರಾಮದ ಪ್ರತಿ ಬೀದಿ ಬೀದಿಗಳನ್ನು ದೀಪಾಲಂಕಾರದ ವ್ಯವಸ್ಥೆ ಮಾಡಬೇಕು. ವಿಶೇಷವಾಗಿ ಯೋಗನರಸಿಂಹ ಸ್ವಾಮಿ ಬೆಟ್ಟಕ್ಕೆ ವಿಶೇಷ ದೀಪಾಂಕಾರ ಮಾಡಬೇಕು ಎಂದು ಹೇಳಿದರು.

ಸಭೆಯಲ್ಲಿ ಮಾತನಾಡಿದ. ಡಿಸಿ ಡಾ ವೆಂಕಟೇಶ್, ಈ ಉತ್ಸವಕ್ಕೆ ರಾಜ್ಯ ನಾನಾ ಕಡೆಗಳಿಂದ ಭಕ್ತರು ಆಗಮಿಸಲಿದ್ದಾರೆ ಹಾಗಾಗಿ ಇಲ್ಲಿಗೆ ಬರುವ ಭಕ್ತರಿಗೆ ಯಾವುದೇ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಬೇಕೆಂದು ಸೂಚಿಸಿದರು.

ವೈರಮುಡಿ ಉತ್ಸವಕ್ಕೆ ರಾಜ್ಯ ಮತ್ತು ಹೊರರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಶುದ್ಧವಾದ ಕುಡಿಯುವ ನೀರು, ಸ್ವಚ್ಛತೆ, ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ, ಆಂಬ್ಯುಲೆನ್ಸ್ ವ್ಯವಸ್ಥೆ ಹಾಗೂ ಶಾಂತಿ ಸುವ್ಯವಸ್ಥೆ ಪಾಲನೆ ಮತ್ತು ಭದ್ರತಾ ವ್ಯವಸ್ಥೆಗಳ ಬಗ್ಗೆ ಅಧಿಕಾರಿಗಳು ಕಾಳಜಿವಹಿಸಬೇಕು,” ಎಂದು ಸೂಚನೆ ನೀಡಿದರು.

ದೇವಾಲಯಕ್ಕೆ ವಿಶೇಷ ದೀಪಾಲಂಕಾರ, ವ್ಯವಸ್ಥಿತ ಸಂಚಾರ ಮತ್ತು ವಾಹನ ನಿಲುಗಡೆ, ಉತ್ಸವ ಪೂರ್ತಿ ನಿರಂತರ ವಿದ್ಯುತ್ ಸರಬರಾಜು ವ್ಯವಸ್ಥೆ, ಮುಖ್ಯ ರಸ್ತೆಗಳ ದುರಸ್ತಿ, ಬ್ರಹ್ಮೋತ್ಸವಕ್ಕೆ ಆಗಮಿಸುವವರಿಗೆ ಸೂಕ್ತವಾದ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿ ಎಂದು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.

ದೇವಾಲಯದ ರಥದ ದುರಸ್ತಿ, ದೇವಾಲಯದ ಪ್ರಾಂಗಣ ಹಾಗೂ ಕಲ್ಯಾಣಿಗಳನ್ನು ಸ್ವಚ್ಛಗೊಳಿಸಬೇಕು ಎಂದರು.

ಸಭೆಯಲ್ಲಿ ಪಾಂಡವಪುರದ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿರವರು, ಎಎಸ್ಪಿ ಧನಂಜಯ,. ಪಾಂಡವಪುರ ತಹಶೀಲ್ದಾರ್ ಪ್ರಮೋದ ಪಾಟೀಲ್ ರವರು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಚೇಗೌಡ ಉಪಸ್ಥಿತರಿದ್ದರು.

Share This Article
Leave a comment