ಇಂದು ಮೇಲುಕೋಟೆಯಲ್ಲಿ ವೈರಮುಡಿ ಉತ್ಸವ : ಸಿಎಂ ಬೊಮ್ಮಾಯಿ ಚಾಲನೆಗೆ ಸಿದ್ದತೆ

Team Newsnap
2 Min Read

ಐತಿಹಾಸಿಕ ಧಾರ್ಮಿಕ ಕ್ಷೇತ್ರ ಮೇಲುಕೋಟೆಯಲ್ಲಿ ಕಳೆದ ಎರಡು ದಿನಗಳಿಂದ ವೈರಮುಡಿ ಬ್ರಹ್ಮೋತ್ಸವ ಆರಂಭವಾಗಿದೆ. ಕೊರೊನಾ ಕಾರಣಕ್ಕೆ ಎರಡು ವರ್ಷಗಳಿಂದ ಸರಳವಾಗಿ ನಡೆದಿದ್ದ ಉತ್ಸವ ಈ ಬಾರಿ ವಿಜೃಂಭಣೆಯಿಂದ ನೆರವೇರಲಿದೆ.

ಇಂದಿನ ವೈರಮುಡಿ ಉತ್ಸವಕ್ಕೆ ಸಿಎಂ ಬೊಮ್ಮಾಯಿ ಚಾಲನೆ ಮಾಡಲಿದ್ದಾರೆ.

ಸ್ಥಾನಿಕರ ಗಲಾಟೆ :

ಈ ನಡುವೆ ಮೇಲುಕೋಟೆ 4 ನೇ ಸ್ಥಾನಿಕರ ಕುಟುಂಬಸ್ಥರು ಇಂದು ವೈರಮುಡಿ ಕಿರೀಟವನ್ನು ಮಂಡ್ಯ ಖಜಾನೆಯಿಂದ ಹಕ್ಕು ಪ್ರತಿಪಾದನೆ ವಿಚಾರದಲ್ಲಿ ಗಲಾಟೆ ಮಾಡಿ ವಾಹನ ತಡೆದು ಪ್ರತಿಭಟನೆ ಮಾಡಿದರು. ನಂತರ ಪೋಲಿಸರು ಅವರನ್ನು ತಳ್ಳಿ ಹಾಕಿ ವಾಹನ ಮಂಡ್ಯಕ್ಕೆ ತೆರಳಲು ಅವಕಾಶ ಮಾಡಿಕೊಟ್ಟರು.

ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಮೇಲುಕೋಟೆ :

ವೈರಮುಡಿ ಉತ್ಸವ ಹಿನ್ನೆಲೆ ಮೇಲುಕೋಟೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳುಸುತ್ತಿದೆ. ಭೂ ವೈಕುಂಠ ಎಂಬ ಪ್ರಖ್ಯಾತವಾಗಿರುವ ಮೇಲುಕೋಟೆ ಹಲವು ಪುರಾಣ, ಇತಿಹಾಸಗಳನ್ನುತುಂಬಿಕೊಂಡ ಪ್ರಮುಖ ಧಾರ್ಮಿಕ ಕ್ಷೇತ್ರ.
ಯಾದವಾದ್ರಿ, ನಾರಾಯಣಾದ್ರಿ, ಯತಿಶೈಲ, ತಿರುನಾರಾಯಣಪುರ, ಯದುಗಿರಿ, ದಕ್ಷಿಣ ಬದರಿ ಕ್ಷೇತ್ರ.. ಹೀಗೆ ಹಲವಾರು ಹೆಸರುಗಳಿಂದ ಕರೆಯಲ್ಪಡುವ ಮೇಲುಕೋಟೆ ದಕ್ಷಿಣ ಭಾರತದ ಬಹು ಮುಖ್ಯ ನಾಲ್ಕು ವೈಷ್ಣವ ಕ್ಷೇತ್ರಗಳಲ್ಲೊಂದು. ಇಲ್ಲಿ ವರ್ಷ ಪೂರ್ತಿ ಉತ್ಸವಗಳು ನೆರವೇರಿದರೂ ಅದರಲ್ಲೂಪ್ರಮುಖವಾಗಿ ಅಂದ್ರೆ ವೈರಮುಡಿ ಬ್ರಹ್ಮೋತ್ಸವ.

9 ದಿನ ನಡೆಯುವ ಐತಿಹಾಸಿಕ ಬ್ರಹ್ಮೋತ್ಸವಕ್ಕೆ ಕಳೆದ ಎರಡು ದಿನಗಳ ಹಿಂದೆ ಗರುಡ ಧ್ವಜಾರೋಹಣದೊಂದಿಗೆ ಚಾಲನೆ ದೊರಕಿದೆ. 

ಮೇಲುಕೋಟೆಗೆ ದೀಪಾಲಂಕಾರ ಮಾಡಲಾಗಿದೆ. ಇಡೀ ಮೇಲುಕೋಟೆಯಲ್ಲಿ ವೈಕುಂಠವೇ ಧರಗೆ ಇಳಿದಂತೆ ಕಾಣುತ್ತಿದೆ, ಭಕ್ತರ ಅನುಕೂಲಕ್ಕಾಗಿ ಬೆಂಗಳೂರು, ಮೈಸೂರು, ಮಂಡ್ಯ, ಹಾಸನದಿಂದ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ತಮಿಳುನಾಡು, ಆಂಧ್ರ ಪ್ರದೇಶದಿಂದ ಸಾವಿರಾರು ಸಂಖ್ಯೆಯ ಭಕ್ತರು ಆಗಮಿಸಿದ್ದು, ಮೇಲುಕೋಟೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.

17ರಂದು ಮಹಾ ರಥೋತ್ಸವ ಹಾಗೂ 18ರಂದು ಕಲ್ಯಾಣಿಯಲ್ಲಿ ತೆಪ್ಪೋತ್ಸವ ಹಾಗೂ ಲೇಜರ್ ಶೋ ನಡೆಯಲಿದೆ.

ಈ ಬಾರಿಯ ಅದ್ದೂರಿ ಜಾತ್ರಾಮಹೋತ್ಸವಕ್ಕೆ10 ಲಕ್ಷ ಜನ ಸೇರುವ ನಿರೀಕ್ಷೆ ಇದೆ ಭದ್ರತೆಗಾಗಿ 2 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಅಲ್ಲದೆ ಜನರ ಆರೋಗ್ಯದ ದೃಷ್ಟಿಯಿಂದ 10 ಅಂಬ್ಯುಲೆನ್ಸ್ ಹಾಗೂ ವೈದ್ಯಕೀಯ ತಂಡ ನಿಯೋಜಿಸಲಾಗಿದೆ.

Share This Article
Leave a comment