January 29, 2026

Newsnap Kannada

The World at your finger tips!

punith raj12

ಪುನೀತ್ ಬಗ್ಗೆ ಅಶ್ಲೀಲ ಭಾಷೆಯ ಪೋಸ್ಟ್ – ವ್ಯಕ್ತಿ ಬಂಧನ

Spread the love

ನಟ ಪವರ್ ಸ್ಟಾರ್ ಪುನೀತ್ ರಾಜ್‌ ಕುಮಾರ್‌ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಟೀಕೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ನಟ ಪುನೀತ್ ರಾಜ್‍ಕುಮಾರ್ ನಿಧನರಾದ ಹಿನ್ನೆಲೆ ಕಳೆದ ಶುಕ್ರವಾರ ಮದ್ಯ ಮಾರಾಟವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.

ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೇ ಇರಲಿ ಎಂಬುದು ಈ ಆದೇಶದ ಹಿಂದಿನ ಉದ್ದೇಶ ಆಗಿತ್ತು.

ಕುಡಿದ ಅಮಲಿನಲ್ಲಿ ಅಭಿಮಾನಿಗಳು ಭಾವೋದ್ವೇಗಕ್ಕೆ ಒಳಗಾಗಬಹುದು. ಅದನ್ನು ತಪ್ಪಿಸಲು ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿತ್ತು.

ಪುನೀತ್ ರಾಜ್ ಕುಮಾರ್ ಸಾವನ್ನಪ್ಪಿದ ದಿನ ಮದ್ಯಖರೀದಿ ಮಾಡಿದ ಕೀಳು ಮನಸ್ಸಿನ ವ್ಯಕ್ತಿಯೊಬ್ಬ ಮದ್ಯ ಬಾಟಲಿಯ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವುದರ ಜೊತೆಗೆ, ರಾಜ್ ಕುಮಾರ್ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಆತನನ್ನು ನೆನಪಿಟ್ಟುಕೊಳ್ಳಿ. ಮರೆಯಬೇಡಿ. ಯಾಕೆಂದರೆ, ಇದನ್ನು ಕುಡಿದ ಬಳಿಕ ಅವನ ಸಮಾಧಿ ಮೇಲೆ ನಾವು ಮೂ…. ಮಾಡುತ್ತೇವೆ ಎಂದು ಅಶ್ಲೀಲ ಪದಗಳನ್ನು ಬಳಸಿ ಪೋಸ್ಟ್ ಮಾಡಿದ್ದ.

ಈ ಹಿನ್ನಲೆ ನಗರ ಸೈಬರ್ ಪೊಲೀಸರು ಪೋಸ್ಟ್ ಹಿಂದೆ ಬಿದ್ದಿದ್ದರು. ಇದೀಗ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಆರೋಪಿ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೇ ವ್ಯಕ್ತಿಯ ಹೆಸರನ್ನು ಪೊಲೀಸರು ಬಹಿರಂಗ ಪಡಿಸಿಲ್ಲ.

error: Content is protected !!