ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ : ಎಫ್‌ಐಆರ್‌ ದಾಖಲು

Team Newsnap
1 Min Read

ಶಿವಮೊಗ್ಗ: ಅಧಿಕಾರಿಗಳು ಮತ್ತು ಬ್ಯಾಂಕ್‌ ಉದ್ಯೋಗಿ ವಿರುದ್ಧ , ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ (Valmiki Corporation) ಅವ್ಯವಹಾರ ಆರೋಪ ಹಾಗೂ ನಿಗಮದ ಅಧೀಕ್ಷಕನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಾಗಿದೆ.

ವಿನೋಬನಗರ ಠಾಣೆಯಲ್ಲಿ ನಿರ್ದೇಶಕ ಜೆ.ಜಿ.ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣವರ, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮಿತಾ ರವುಲ್‌ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಪ್ರಕರಣದ ವಿವರ !

ಚಂದ್ರಶೇಖರನ್‌ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಬೆಂಗಳೂರು ಕಚೇರಿಯಲ್ಲಿ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು , ಭಾನುವಾರ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಡೆತ್‌ನೋಟ್‌ನಲ್ಲಿ ತನ್ನ ಸಾವಿಗೆ ಕಾರಣರಾಗಿದ್ದಾರೆ ಎನ್ನಲಾದವರ ಹೆಸರು ಮತ್ತು ನಿಗಮದಲ್ಲಿ ನಡೆದ ಅವ್ಯವಹಾರದ ಬಗ್ಗೆ ಉಲ್ಲೇಖಿಸಿದ್ದಾರೆ.

ಇದೀಗ ಆತ್ಮಹತ್ಯೆಗೂ ಮುನ್ನ ಚಂದ್ರಶೇಖರನ್‌ ಬರೆದಿಟ್ಟಿರುವ 6 ಪುಟಗಳ ಡೆತ್‌ನೋಟ್‌ ಸಂಚಲನ ಮೂಡಿಸಿದ್ದು , ಡೆತ್‌ನೋಟ್‌ನಲ್ಲಿ ತಾವು ಕರ್ತವ್ಯ ನಿರ್ವಹಿಸುತ್ತಿದ್ದ ನಿಗಮದಲ್ಲಿ ಅವ್ಯವಹಾರ ಆಗಿದೆ ಎಂದು ಉಲ್ಲೇಖಿಸಿದ್ದಾರೆ.

ನಿಗಮದ ಅಧಿಕಾರಿಗಳು ಇಲಾಖೆಯ ಖಾತೆಯ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.ಕಾನ್ಸ್ ಟೇಬಲ್ ರೈಲಿಗೆ ಸಿಲುಕಿ ಆತ್ಮಹತ್ಯೆಗೆ ಶರಣು

ಡೆತ್‌ನೋಟ್‌ನಲ್ಲಿ ಪ್ರಸ್ತಾಪಿಸಿರುವ ಅಧಿಕಾರಿಗಳೇ ಅಕ್ರಮ ಎಸಗಿದ್ದು , ಇದೇ ಕಾರಣಕ್ಕೆ ನೇಣಿಗೆ ಶರಣಾಗುತ್ತಿರುವೆ. ನಿಗಮಕ್ಕೆ ಸಂಬಂಧಿಸಿದ 187 ಕೋಟಿ ರೂ. ಅವ್ಯವಹಾರಕ್ಕೆ ಕಾರಣರಾದವರ ಹೆಸರನ್ನು ಡೆತ್‌ನೋಟ್‌ನಲ್ಲಿ ಬರೆದಿರುವುದಾಗಿ ಉಲ್ಲೇಖಿಸಿದ್ದಾರೆ.

Share This Article
Leave a comment