ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ

Team Newsnap
1 Min Read
Vande Bharat train service to start between Dharwad and Bangalore by July - Joshi ಜುಲೈ ವೇಳೆಗೆ ಧಾರವಾಡ - ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ - ಜೋಶಿ

ಜುಲೈ ವೇಳೆಗೆ ಬೆಂಗಳೂರು-ಹುಬ್ಬಳ್ಳಿ ಧಾರವಾಡ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸಲಿದೆ.

ಹುಬ್ಬಳ್ಳಿ-ಧಾರವಾಡ-ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಆರಂಭಿಸುವ ಬಗ್ಗೆ ಚರ್ಚಿಸಲು ಕೇಂದ್ರ ಸಚಿವ ಹಾಗೂ ಧಾರವಾಡ ಸಂಸದ ಪ್ರಹ್ಲಾದ ಜೋಶಿ ದೆಹಲಿಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದರು.

ಈ ಕುರಿತಂತೆ ಟ್ವೀಟ್ ಮಾಡಿರುವ ಸಚಿವ ಪ್ರಹ್ಲಾದ್ ಜೋಶಿ, ವಂದೇ ಭಾರತ್ ರೈಲು ಸೇವೆಯನ್ನು ಪ್ರಾರಂಭಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. ಜುಲೈ ವೇಳೆಗೆ ರಾಜ್ಯದಲ್ಲಿ ಎರಡನೇ ವಂದೇ ಭಾರತ್ ರೈಲನ್ನು ಆರಂಭಿಸುವುದಾಗಿ ರೇಲ್ವೆ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ನೈಋತ್ಯ ರೈಲ್ವೆ (SWR) ಮತ್ತು ರೈಲ್ವೆ ವಿದ್ಯುದ್ದೀಕರಣ ಕೇಂದ್ರ ಸಂಸ್ಥೆ (CORE) ಹುಬ್ಬಳ್ಳಿ ಮತ್ತು ಬೆಂಗಳೂರು ನಡುವೆ ಬಾಕಿ ಉಳಿದಿರುವ ವಿದ್ಯುದ್ದೀಕರಣ ಕಾಮಗಾರಿಗಳನ್ನು ಪೂರ್ಣಗೊಳಿಸಲು ಶ್ರಮಿಸುತ್ತಿದೆ.

ಹುಬ್ಬಳ್ಳಿ-ಹಾವೇರಿ ನಡುವಿನ ಕೆಲವು ಭಾಗಗಳನ್ನು ಹೊರತುಪಡಿಸಿ ಹುಬ್ಬಳ್ಳಿ-ಬೆಂಗಳೂರು ನಡುವಿನ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಂಡಿದೆ.ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್

ಬಾಕಿ ಉಳಿದಿರುವ ಕಾಮಗಾರಿಗಳು 2-3 ವಾರಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.

Share This Article
Leave a comment