January 14, 2026

Newsnap Kannada

The World at your finger tips!

bajrang Dal , protest , film

Veeragase dispute: Bajrang Dal protests by garlanding Dolly cutout ವೀರಗಾಸೆ ವಿವಾದ: ಡಾಲಿ ಕಟೌಟ್‌ಗೆ ಚಪ್ಪಲಿ ಹಾರ ಹಾಕಿ ಭಜರಂಗದಳ ಪ್ರತಿಭಟನೆ

ವೀರಗಾಸೆ ವಿವಾದ: ಡಾಲಿ ಕಟೌಟ್‌ಗೆ ಚಪ್ಪಲಿ ಹಾರ ಹಾಕಿ ಭಜರಂಗದಳ ಪ್ರತಿಭಟನೆ

Spread the love

ಹೆಡ್ ಬುಷ್ ಸಿನಿಮಾದಲ್ಲಿ ವೀರಗಾಸೆ ಕುಣಿತಕ್ಕೆ ಅಪಮಾನ ಮಾಡಲಾಗಿದೆ. ಇದರಿಂದ ಹಿಂದೂ ಧರ್ಮಕ್ಕೆ ಅವಮಾನವಾಗಿದೆ ಎಂದು ಆರೋಪಿಸಿ ಭಜರಂಗದಳದ ಕಾರ್ಯಕರ್ತರು ಡಾಲಿ ಧನಂಜಯ್ ಕಟೌಟ್‌ಗೆ ಚಪ್ಪಲಿ ಹಾರ ಹಾಕಿ, ಕಪ್ಪು ಮಸಿ ಬಳಿದು ಆಕ್ರೋಶ ಹೊರಹಾಕಿದ ಘಟನೆ ತಿಪಟೂರಿನ ಲಕ್ಷ್ಮೀ ಚಿತ್ರಮಂದಿರದ ಆವರಣದಲ್ಲಿ ನಡೆದಿದೆ.

ಡಾಲಿ ಧನಂಜಯ ಕ್ಷಮೆ ಕೇಳಬೇಕು ಹಾಗೂ ಚಿತ್ರದಿಂದ ವಿವಾದಿತ ದೃಶ್ಯಕ್ಕೆ ಕತ್ತರಿ ಹಾಕಬೇಕು ಎಂದು ಪ್ರತಿಭಟನಾಕಾರು ಆಗ್ರಹಿಸಿದ್ದಾರೆ. ಇಲ್ಲದಿದ್ದರೇ ಯಾವ ಚಿತ್ರಮಂದಿರಗಳಲ್ಲೂ ಈ ಚಿತ್ರ ಪ್ರದರ್ಶನ ಮಾಡದಂತೆ ತಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿ ಸಿಡಿತದಿಂದ 93 ಮಂದಿಗೆ ಗಾಯ

ಡಾಲಿ ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾದಲ್ಲಿ ಕರಗ ಮತ್ತು ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಸಿನಿಮಾ ಬೈಕಾಟ್ ಕೂಗು ಒಂದೆಡೆ ಕೇಳಿಬಂದಿದ್ದರೆ, ಮತ್ತೊಂದೆಡೆ ಅಭಿಮಾನಿಗಳು ಡಾಲಿ ಧನಂಜಯ್ ಪರವಾಗಿದ್ದೇವೆ ಎಂಬ ಧ್ವನಿ ಎತ್ತಿದ್ದಾರೆ.

ಕನ್ನಡದ ಇತರ ಸ್ಟಾರ್ ನಟ ಜೊತೆಗಿರುವ ಡಾಲಿ ಧನಂಜಯ್ ಫೋಟೋ ಹಾಗೂ ಅವರು ಮಾತನಾಡಿರುವ ವೀಡಿಯೋಗಳ ತುಣುಕು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ, ಹ್ಯಾಷ್ ಟ್ಯಾಗ್ ಟ್ವಿಟ್ಟರ್‌ನಲ್ಲಿ ಟ್ರೆಂಡ್ ಆಗಿದೆ.

error: Content is protected !!