December 23, 2024

Newsnap Kannada

The World at your finger tips!

WhatsApp Image 2022 09 20 at 10.26.32 AM

ರಾಜ್ಯಪ್ರಶಸ್ತಿ ಪುರಸ್ಕೃತ, ಪರಿಸರ ಪ್ರೇಮಿ ಸಾಲುಮರದ ವೀರಾಚಾರಿ ಆತ್ಮಹತ್ಯೆ

Spread the love

ಸಾಲುಮರದ ವೀರಾಚಾರಿ, ಪರಿಸರ ಪ್ರೇಮಿ ಮಿಟ್ಲಕಟ್ಟೆ ವೀರಾಚಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹರಿಹರ ತಾಲೂಕಿನ ಮಿಟ್ಲಕಟ್ಟೆ ಗ್ರಾಮದಲ್ಲಿ ಕಳೆದ ರಾತ್ರಿ ಜರುಗಿದೆ.

ಮಿಟ್ಲಗಟ್ಟೆ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಬಡವರಿಗೆ ಸೂಕ್ತವಾಗಿ ಅಕ್ಕಿ ವಿತರಣೆಯಾಗುತ್ತಿಲ್ಲ ಎಂದು ನ್ಯಾಯಬೆಲೆ ಅಕ್ರಮದ ವಿರುದ್ಧ ನಿರಂತರವಾಗಿ ಕಳೆದ ಒಂದು ವರ್ಷದಿಂದ ವೀರಾಚಾರಿ ಅವರು ಹೋರಾಟ ನಡೆಸುತ್ತಿದ್ದರು. ಆದರೆ ಸೋಮವಾರ ಇದೇ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನ್ಯಾಯ ಬೆಲೆ ಅಂಗಡಿ ರದ್ದು ಮಾಡಬೇಕೋ? ಬೇಡವೇ? ಎಂಬ ಬಗ್ಗೆ ಚರ್ಚೆ ನಡೆದಿತ್ತು.

ಮಿಟ್ಲಕಟ್ಟೆ ವೀರಾಚಾರಿ ಅವರು, ನ್ಯಾಯಾಲಯದಲ್ಲಿ ನ್ಯಾಯ ಸಿಗದಿದ್ದರೆ, ಜನರಲ್ಲಿ ನ್ಯಾಯ ಸಿಗದಿದ್ದರೆ, ದೇವರಲ್ಲಿ ನ್ಯಾಯ ಸಿಗದಿದ್ದರೆ ನೇಣಿಗೆ ಶರಣಾಗುವುದಾಗಿ ವಾಗ್ದಾನ ಮಾಡಿದ್ದರು. ಇದೀಗ ವಾಗ್ದಾನದಂತೆ ಸೋಮವಾರ ರಾತ್ರಿ 2 ಗಂಟೆಗೆ ನೇಣಿಗೆ ಶರಣಾಗಿದ್ದಾರೆ. ರಾಜ್ಯದಲ್ಲಿ 11133 ಗುತ್ತಿಗೆ ಪೌರ ಕಾರ್ಮಿಕ ಸೇವೆ ಕಾಯಂಗೆ ನಿರ್ಧಾರ

ರಾಜ್ಯ ಪ್ರಶಸ್ತಿ ವಿಜೇತ ಸಾಲುಮರದ ವೀರಾಚಾರಿ ಮಧ್ಯರಾತ್ರಿ ಮರಕ್ಕೆ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾರೆ. 3,000ಕ್ಕೂ ಹೆಚ್ಚು ಮರಗಳನ್ನು ಬೆಳೆಸಿ ದಾವಣಗೆರೆ ಜಿಲ್ಲೆಗೆ ವೀರಾಚಾರಿ ಚಿರಪರಿಚಿತರಾಗಿದ್ದರು. ಸಾಲುಮರಗಳನ್ನು ಬೆಳೆಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!