ಐಎಎಸ್ ಅಧಿಕಾರಿ ಅನುರಾಗ ತಿವಾರಿ ಸಾವಿನ ಹಿಂದೆ ತಮ್ಮ ಪತ್ನಿ, ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ಕೈವಾಡ ಇದೆ ಎಂದು ಐಎಫ್‌ಎಸ್ ಅಧಿಕಾರಿ ನಿತೀನ್ ಸುಭಾಶ್ ಗಂಭೀರ ಆರೋಪ ಮಾಡಿ, ಈ ಸಂಬಂಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ವರ್ತಿಕಾ ಕಟಿಯಾರ್ ಹಾಗೂ ಅವರ ಪತಿ ಐಎಫ್‌ಎಸ್ ಅಧಿಕಾರಿ ನಿತೀನ್ ಸುಭಾಶ್ ನಡುವಿನ ಕೌಟುಂಬಿಕ ಕಲಹ ತಾರಕಕ್ಕೇರಿದೆ.
ರಾಜ್ಯದ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರಿಗೆ ಪತ್ರ ಬರೆದು ಪತ್ನಿ ವರ್ತಿಕಾ ಕಟಿಯಾರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಬೇರೊಬ್ಬನ ಜೊತೆ ಅವರು ಓಡಾಟ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.
ಅಯಾಜ್ ಖಾನ್ ಎಂಬುವನ ಜೊತೆ ಕೆಸಿನೊ ಸೇರಿದಂತೆ ಬೇರೆ ಬೇರೆ ಕಡೆ ಓಡಾಡುತ್ತಿದ್ದಾರೆ. ಶ್ರೀಲಂಕಾ, ಅಫ್ಘಾನಿಸ್ತಾನ, ಸ್ವಿಟ್ಜರ್‌ಲ್ಯಾಂಡ್, ಆಸ್ಟ್ರೀಯಾ, ಇಟಲಿ ಸೇರಿದಂತೆ ವಿವಿಧ ದೇಶಗಳಿಗೆ ಜೊತೆಯಲ್ಲಿ ಓಡಾಟ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಅನುರಾಗ್ ಸಾವು ಪ್ರಕರಣದಲ್ಲಿ ಆಕೆಯ ವಿರುದ್ಧ ಕ್ರಮ ಜರುಗಿಸಬೇಕೆಂದು ಪತ್ರದಲ್ಲಿ ನಿತೀನ್ ಸುಭಾಶ್ ಮನವಿ ಮಾಡಿದ್ದಾರೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ